ಬನ್ನೂರು: ರಾಜ್ಯಾದ್ಯಂತ ಜನಾಶೀರ್ವಾದ ಯಾತ್ರೆ ಆರಂಭಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬನ್ನೂರಿಗೆ ಆಗಮಿಸಿ ರೈತರೊಂದಿಗೆ ಸಂವಾದ ನಡೆಸಿದರು.
ಮೈಸೂರು ಜಿಲ್ಲೆಯ ಬನ್ನೂರಿಗೆ ಆಗಮಿಸಿದ ಸಚಿವೆ ಶೋಭಾಕರಂದ್ಲಾಜೆ ಅವರನ್ನು ಪಕ್ಷದ ಕಾರ್ಯಕರ್ತರು ಶಾಲು ಹೊದಿಸಿ, ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ರೈತಸಂವಾದ ಕಾರ್ಯಕ್ರಮದಲ್ಲಿ ಅನ್ನದಾತರ ಅಹವಾಲುಗಳನ್ನು ಆಲಿಸಿದರು.
ಇನ್ನು ಬನ್ನೂರಿನ ಸುತ್ತ ಮುತ್ತಲ ಗ್ರಾಮಗಳಿಂದ ಆಗಮಿಸಿದ ನೂರಾರು ರೈತರು ಸಚಿವರಿಗೆ ಕೃಷಿಯಲ್ಲಿ ಸಮಸ್ಯೆಗಳನ್ನು ಹೇಳಿಕೊಂಡು ಆದಷ್ಟು ಬೇಗ ಪರಿಹರಿಸುವಂತೆ ಮನವಿ ಮಾಡಿದರು. ಇದು ಕೇಂದ್ರ ಸರ್ಕಾರದ ಮಟ್ಟದಲ್ಲಿ ಕೆಲಸವಾಗಬೇಕಿರುವುದರಿಂದ ನಿಮ್ಮ ಎಲ್ಲ ಬೇಡಿಕೆಗಳ ಬಗ್ಗೆ ಕೇಂದ್ರ ಕೃಷಿ ಸಚಿವರ ಗಮನಕ್ಕೆ ತರಲಾಗುವುದು ಎಂದರು.
ಇನ್ನು ಇದು ಬರಿ ಬನ್ನೂರು ಹೋಬಳಿಯ ರೈತರ ಸಮಸ್ಯೆಯಷ್ಟೇ ಅಲ್ಲ ಇಡೀ ದೇಶದ ರೈತರು ಎದುರಿಸುತ್ತಿರುವ ಸಮಸ್ಯೆಯಗಿದೆ ಎಂದ ಅವರು, ಇನ್ನು ಇದೆ ಆ.27ರಂದು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಆ ಸಭೆಯಲ್ಲಿ ನೀವು ತಿಳಿಸಿರುವ ಎಲ್ಲ ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಇನ್ನು ಕಿಸಾನ್ ಸಮ್ಮಾನ್ ಯೋಜನೆ ನಿಮ್ಮ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಬರುತ್ತಿದೆ. ಹೀಗಾಗಿ ಆ ಬಗ್ಗೆ ನೀವು ಚಿಂತಿಸುವ ಅಗತ್ಯವಿಲ್ಲ. ಎಲ್ಲ ರೈತರಿಗೂ ಕೇಂದ್ರ ಸೌಲಭ್ಯಗಳು ಸಿಗುವಂತೆ ಮಡುವುದೆ ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.
ಇನ್ನು ಇದಕ್ಕೂ ಮೊದಲು ಮಂಡ್ಯಕ್ಕೆ ಆಗಮಿಸಿದ ಸಚಿವರು ಮಂಡ್ಯದ ಹೊಸಗನಹಳ್ಳಿಯಲ್ಲಿ ಭತ್ತದ ನಾಟಿ ಮಾಡಿ ಬಳಿಕ ಗ್ರಾಮದ ರೈತರ ಸಮಸ್ಯೆಯನ್ನು ಆಲಿಸಿದರು. ಇದರಿಂದ ಪಕ್ಷದ ಕಾರ್ಯಕರ್ತರು ಮತ್ತು ರೈತರು ತುಂಬ ಸಂತಸ ವ್ಯಕ್ತಪಡಿಸಿದರು.