ನ್ಯೂಡೆಲ್ಲಿ: ಇಂದು ಸಂಜೆಯೊಳಗೆ ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ. ಸಂಪುಟ ರಚನೆ ಕುರಿತು ಚರ್ಚೆ ಮಾಡಿದ್ದೇವೆ. ಎಷ್ಟು ಮಂದಿ ಸಂಪುಟದಲ್ಲಿರಬೇಕು ಎಂಬುದನ್ನು ಹೈಕಮಾಂಡ್ ತಿಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ನಿನ್ನೆ ಭೇಟಿಯಾದ ಬಳಿಕ ಮಾತನಾಡಿದ ಅವರು, ಎರಡ್ಮೂರು ಪಟ್ಟಿಗಳನ್ನು ಕೊಟ್ಟಿದ್ದೇನೆ. ಹೀಗಾಗಿ ಮಂಗಳವಾರ ಹೈಕಮಾಂಡ್‍ನಿಂದ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.
ಇನ್ನು ಡಿಸಿಎಂ ಹುದ್ದೆ ಸೃಷ್ಟಿ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದಕ್ಕಿಂತ ಮುಖ್ಯವಾಗಿ ನಮ್ಮ ಪಕ್ಷದಲ್ಲಿ ಯಾರೂ ವಲಸಿಗರಲ್ಲ, ಎಲ್ಲರೂ ಬಿಜೆಪಿಯವರೇ ಎಂದು ತಿಳಿಸಿದರು.
ಪ್ರಾದೇಶಿಕತೆ, ಸಮುದಾಯ ಸೇರಿದಂತೆ ಎಲ್ಲವನ್ನೂ ಪರಿಗಣಿಸಿ ಸಂಪುಟ ಪಟ್ಟಿ ಬಿಡುಗಡೆ ಮಾಡುತ್ತಾರೆ. ಮಂಗಳವಾರ ರಾತ್ರಿಯೊಳಗೆ ಸಂಪುಟ ಸೇರುವವರ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಬಿಡುಗಡೆ ಮಾಡಲಿದ್ದು, ಬಳಿಕ ಪ್ರಮಾಣ ವಚನದ ಕುರಿತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದರು.
ಬೆಂಗಳೂರಿನಲ್ಲಿ ಪೊಲೀಸರ ಮೇಲೆ ವಿದೇಶಿ ಪ್ರಜೆಗಳು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾವು ರಾಜ್ಯದಲ್ಲಿ ಡ್ರಗ್ಸ್ ಪ್ರಕರಣ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಂಡಿದ್ದೇವೆ. ವಿದೇಶಿ ಪ್ರಜೆಗಳು ಮೊದಲು ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಪೊಲೀಸರು ಅವರ ವಿರುದ್ಧ ಸರಿಯಾದ ಕ್ರಮ ಕೈಗೊಂಡಿದ್ದಾರೆ ಎಂದು ಸಮರ್ಥಿಸಿಕೊಂಡರು.
ರಾಜ್ಯ ಸಾರಿಗೆ ನೌಕರರು 2018ರಲ್ಲೇ ಸರ್ಕಾರಿ ನೌಕರರೆಂದು ಪರಿಗಣಿಸಲು ಸಿಎಂ, ಪ್ರಧಾನಿಗೆ ಪತ್ರ ಬರೆದಿದ್ದರು