ನ್ಯೂಡೆಲ್ಲಿ: ಸೂಕ್ತ ವ್ಯಕ್ತಿಗಳನ್ನು ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ದೇಶದಲ್ಲಿ ಹಲವು ಕ್ಷೇತ್ರಗಳಲ್ಲಿ ಹಲವು ಪ್ರತಿಭಾವಂತರಿದ್ದಾರೆ. ಅಂತವರು ತಳಮಟ್ಟದಲ್ಲಿ ಅದ್ವಿತೀಯ ಸಾಧನೆಗಳನ್ನು, ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹ ಪ್ರತಿಭಾವಂತರಲ್ಲಿ ಕೆಲವರು ಎಲೆಮರೆ ಕಾಯಿಯಂತಿರುತ್ತಾರೆ, ಬೆಳಕಿಗೆ ಬಂದಿರುವುದಿಲ್ಲ. ಅಂತಹ ಸ್ಫೂರ್ತಿ ತುಂಬುವ, ಬೇರೆಯವರಿಗೆ ಮಾರ್ಗದರ್ಶನವಾಗಬಲ್ಲ ಸ್ಫೂರ್ತಿದಾಯಕ ಜನರ ಬಗ್ಗೆ ನಿಮಗೆ ತಿಳಿದಿದ್ದರೆ ನೀವು ಅಂತವರನ್ನು ನಾಮನಿರ್ದೇಶನ ಮಾಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
#PeoplesPadma ಎಂಬ ಹ್ಯಾಶ್ ಟ್ಯಾಗ್ ಬಳಸಿ ಪ್ರತಿಭಾವಂತರ ಹೆಸರುಗಳನ್ನು ನಾಮನಿರ್ದೇಶನ ಮಾಡಿ, ನಾಮನಿರ್ದೇಶನ ಸೆಪ್ಟೆಂಬರ್ 15ರವರೆಗೆ ತೆರೆದಿರುತ್ತದೆ. ಎಂದು ಸರ್ಕಾರದ ಪದ್ಮಪ್ರಶಸ್ತಿಯ ವೆಬ್ ಸೈಟ್ ನ್ನು ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಪದ್ಮ ಪ್ರಶಸ್ತಿಗಳೆಂದರೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನೊಳಗೊಂಡಿದ್ದು, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿವೆ. ಕಳೆದ ಕೆಲವು ವರ್ಷಗಳಲ್ಲಿ, ಮೋದಿ ಸರ್ಕಾರವು ಸಮಾಜಕ್ಕೆ ನೀಡಿದ ಜೀವಮಾನದ ಕೊಡುಗೆಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳಿಗಾಗಿ ಪದ್ಮ ಪ್ರಶಸ್ತಿಗಳನ್ನು ಸಮಾಜದ ವಿವಿಧ ವರ್ಗದ ಜನರಿಗೆ ನೀಡಿ ಗೌರವಿಸುತ್ತ ಬಂದಿದೆ.
1954 ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ.
India has many talented people, who are doing exceptional work at the grassroots. Often, we don’t see or hear much of them. Do you know such inspiring people? You can nominate them for the #PeoplesPadma. Nominations are open till 15th September. https://t.co/BpZG3xRsrZ
— Narendra Modi (@narendramodi) July 11, 2021