CrimeNEWSದೇಶ-ವಿದೇಶ

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ- ಒಬ್ಬನಿಗೆ ಮಹಿಳೆಯರ ಲೈಂಗಿಕವಾಗಿ ಬಳಸಿಕೊಳ್ಳುವ ಚಟವಿತ್ತು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು ಎರಡು ವರ್ಷದಿಂದಲೂ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವ ಜೋಡಿಗಳನ್ನು ಪೀಡಿಸಿದ್ದು ಮಾತ್ರವಲ್ಲ, ಅವರ ಬಳಿ ಸಿಕ್ಕಿದ್ದನ್ನೆಲ್ಲ ದೋಚುತ್ತಿದ್ದರು.

ಬಂಧಿತ ಐವರು ಆರೋಪಿಗಳಲ್ಲಿ ಒಬ್ಬನಿಗೆ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಚಟವಿತ್ತು. ಒಬ್ಬ ಮಹಿಳೆಯರ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರೆ, ಇನ್ನುಳಿದವರು ಚಿನ್ನಾಭರಣ ಮತ್ತು ಹಣಕ್ಕೆ ಆಸೆ ಬೀಳುತ್ತಿದ್ದರು ಎಂಬ ಅಂಶ ತನಿಖೆಯಲ್ಲಿ ಬಯಲಾಗಿದೆ.

ಕೃತ್ಯ ಎಸಗಿರುವುದಾಗಿ ಆರೋಪಿಗಳೆಲ್ಲರೂ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ವಯಸ್ಸಿನ ವ್ಯತ್ಯಾಸವನ್ನೇ ನೋಡದೆ ಮಹಿಳೆಯರು-ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವನ್ನೂ ಎಸಗುತ್ತಿರುವ ಈ ಪಾಪಿಗಳು ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ಆರೋಪಿಗಳ ಪ್ರಕಾರ, ಮೈಸೂರು ಅವರ ಕುಕೃತ್ಯಗಳಿಗೆ ಹೇಳಿಮಾಡಿಸಿದಂತಿತ್ತು. ಹೊರವಲಯದ ನಿರ್ಜನ ಪ್ರದೇಶಗಳಲ್ಲಿ ಕುಳಿತುಕೊಳ್ಳುವ ಜೋಡಿಗಳೇ ಇವರ ಟಾರ್ಗೆಟ್ ಆಗಿತ್ತು.

ಕೃತ್ಯಕ್ಕೆ ಮುಂದಾದಾಗೆಲ್ಲ ಮೈಸೂರಿನಲ್ಲಿ ಕೆಲಸ ಮಾಡುತ್ತೇವೆ ಎಂಬ ಕುಂಟು ನೆಪದಲ್ಲಿ ಇಲ್ಲಿಗೆ ಬಂದು ದರೋಡೆ, ಸುಲಿಗೆ ಮಾಡುತ್ತಿದ್ದರು. ಜೇಬು ಖಾಲಿಯಾದಾಗ ಮೈಸೂರಿನ ಕಡೆ ಮುಖ ಮಾಡುತ್ತಿದ್ದ ಆರೋಪಿಗಳು ಚಾಮುಂಡಿಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶಕ್ಕೆ ಬಂದು ದರೋಡೆಗೆ ಇಳಿಯುತ್ತಿದ್ದರು.

ಮೈಸೂರು ಹೊರವಲಯದ ರಿಂಗ್ ರಸ್ತೆ, ಲಿಂಗಾಂಬುಧಿ ಕೆರೆಯ ಅಕ್ಕಪಕ್ಕದ ನಿರ್ಜನ ಪ್ರದೇಶ ಇಲ್ಲಿ ಏಕಾಂತ ಬಯಸಿ ಬರುತ್ತಿದ್ದ ಯುವಕ-ಯುವತಿಯರನ್ನು ಬೆದರಿಸಿ ಮೊಬೈಲ್, ಚಿನ್ನದ ಆಭರಣ, ಹಣ ದರೋಡೆ ಮಾಡುತ್ತಿದ್ದರು. ಪಾತಕಿಗಳ ವಿರುದ್ಧ ಯಾರು ದೂರು ಕೊಡದ ಕಾರಣ ಮತ್ತಷ್ಟು ಅಪರಾಧ ಎಸಗಲು ಉತ್ತೇಜನ ನೀಡಿತ್ತು. ಇದಲ್ಲದೇ ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಹಲವಾರು ವಿಚಾರಗಳನ್ನು ಒಂದೊಂದಾಗಿ ಹೊರ ಹಾಕುತ್ತಿದ್ದಾರೆ.

ಪೊಲೀಸರು ನಡೆಸಿದ ಕಾರ್ಯಾಚರಣೆ ರೋಚಕ:  ಹೌದು! ಕರುನಾಡು ಬೆಚ್ಚಿಬೀಳುವಂತೆ ಮಾಡಿದ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್‌ರೇಪ್ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ನಡೆಸಿದ ಕಾರ್ಯಾಚರಣೆ ಕುತೂಹಲ ಮತ್ತು ರೋಚಕವಾಗಿದೆ.

ಆರೋಪಿಗಳ ಮಾಹಿತಿ ದೊರೆತರೂ ಸ್ಥಳಕ್ಕೆ ಹೋಗುವುದು ದೊಡ್ಡ ಸವಾಲಾಗಿದ್ದರಿಂದ ತಂತ್ರಗಾರಿಕೆ ಬಳಸಿದ ಪೊಲೀಸರು ರಾತ್ರಿಯಾಗುವ ತನಕ ಕಾದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಂದು ವೇಳೆ ಕರ್ನಾಟಕ ಪೊಲೀಸರು ತಿರುಪುರ್‌ಗೆ ಬಂದಿರುವ ಸುಳಿವು ಆರೋಪಿಗಳಿಗೆ ಸಿಕ್ಕಿದ್ದರೆ ಪರಾರಿಯಾಗುವ ಸಂಭವವಿತ್ತು.

ಪ್ರಕರಣದ ವಿಚಾರ ಗೊತ್ತಾಗುತ್ತಿದ್ದಂತೆ ಮೈಸೂರಿಗೆ ಧಾವಿಸಿದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರತಾಪ್ ರೆಡ್ಡಿ ಅವರು ದಕ್ಷಿಣ ವಲಯದ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಪರಿಣಿತ ಅಧಿಕಾರಿಗಳು, ಸಿಬ್ಬಂದಿಗಳನ್ನು ಸೇರಿಸಿ 7 ತಂಡ ರಚನೆ ಮಾಡಿದ್ದರು.

ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ತನಿಖೆಯ ವ್ಯೆಹ ರಚಿಸಿದ್ದರು. ಘಟನೆ ನಡೆದ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಾಧಾರ ಹಾಗೂ ಸಂತ್ರಸ್ತೆಯ ಸ್ನೇಹಿತ ನೀಡಿದ್ದ ಕೆಲವು ಮಾಹಿತಿ ತಾಳೆಯಾಗುತ್ತಿತ್ತು. ಆರೋಪಿಗಳು ತಮಿಳು ಭಾಷೆ ಮಾತನಾಡುತ್ತಿದ್ದರು.

ಘಟನಾ ಸ್ಥಳದಲ್ಲಿ ತಾಳವಾಡಿ ಬಸ್ ಟಿಕೆಟ್ ಸಿಕ್ಕಿತ್ತು. ಮೊಬೈಲ್ ಟವರ್‌ನಲ್ಲಿ ಟ್ರೇಸ್ ಆಗಿದ್ದ ಮೊಬೈಲ್ ನಂಬರ್‌ನ ಸಿಮ್ ತಮಿಳುನಾಡಿನಲ್ಲಿ ಬಳಸಿದ್ದ ಸಿಮ್ ಒಂದೇ ಆಗಿತ್ತು. ಇದು ಆರೋಪಿಗಳು ತಮಿಳುನಾಡಿನವರು ಎಂಬುದನ್ನು ಬಲವಾಗಿ ದೃಢಪಡಿಸಿತ್ತು.

ಎರಡು ದಿನದಲ್ಲೇ ಜಾಡು ಪತ್ತೆ ಹಚ್ಚಿದ ಪೊಲೀಸರು: ಘಟನಾ ಸ್ಥಳದಲ್ಲಿ ಟ್ರೇಸ್ ಆಗಿದ್ದ ನಂಬರ್‌ಗಳ ಕಾಲ್ ಡಿಟೇಲ್ ರೆಕಾರ್ಡ್ ಪಡೆದುಕೊಂಡಿದ್ದ ಪೊಲೀಸರು ಈ ಮಾಹಿತಿ ಆಧರಿಸಿ ಆರೋಪಿಗಳ ಬೆನ್ನತ್ತಿ ತಾಳವಾಡಿಗೆ ತೆರಳಿದ್ದರು.

ಇತ್ತ ಆರೋಪಿ ಮೊಬೈಲ್ ಆನ್ ಮಾಡುವುದನ್ನೇ ಕಾಯುತ್ತಿದ್ದ ಸಿಡಿಆರ್ ವಿಭಾಗದ ಸಿಬ್ಬಂದಿ ಆರೋಪಿಯ ಮೊಬೈಲ್ ಆನ್ ಆಗುತ್ತಿದ್ದಂತೆ ಆರೋಪಿಗಳಲ್ಲಿ ಒಬ್ಬನಾದ ಭೂಪತಿ ಎಂಬಾತ ತಾಳವಾಡಿ ಫಿರ್ಕಾದ ಸುಸೈಪುರಂ ಗ್ರಾಮದಲ್ಲಿ ಇದ್ದಾನೆ ಎನ್ನುವುದು ಖಚಿತವಾಗಿತ್ತು.

ತಕ್ಷಣ ಅವರು ತಾಳವಾಡಿಯಲ್ಲಿ ಬೀಡು ಬಿಟ್ಟಿದ್ದ ಪೊಲೀಸರಿಗೆ ಮಾಹಿತಿ ನೀಡದರು. ಈತನ ಬಗ್ಗೆ ಸಂಜೆ ವೇಳೆಗೆ ಸಂಪೂರ್ಣ ಮಾಹಿತಿ ಕಲೆ ಹಾಕಿದ ಪೊಲೀಸರು ತಮಿಳುನಾಡಿನ ಪೊಲೀಸರನ್ನು ತಮ್ಮ ಜತೆಯಲ್ಲೇ ಕರೆದುಕೊಂಡು ಊರ ಹೊರಗೆ ಆರೋಪಿಗೆ ಕಾದಿದ್ದರು.

ಆದರೆ ದಿಢೀರ್ ಆಗಿ ಆರೋಪಿ ಬಂಧನಕ್ಕೆ ಮುಂದಾದರೆ ಪ್ರಕರಣದ ಬಗ್ಗೆ ಅರಿಯದ ಸ್ಥಳೀಯರು ತಿರುಗಿ ಬೀಳಬಹುದು. ಈ ಸಂದರ್ಭವನ್ನೇ ಬಳಸಿಕೊಂಡು ಆರೋಪಿ ಪರಾರಿಯಾಗಬಹುದು ಎಂದರಿತು ರಾತ್ರಿ 11 ಗಂಟೆಯ ತನಕವೂ ಕಾದು ಕುಳಿತಿದ್ದ ಪೊಲೀಸರು ಜನರೆಲ್ಲ ಮಲಗುತ್ತಿದ್ದಂತೆ ಆರೋಪಿಯ ಮನೆಯನ್ನು ಸುತ್ತುವರಿದಿದ್ದಾರೆ. ನಂತರ ಮಲಗಿದ್ದವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ‌

ಸುಸೈಪುರಂನಲ್ಲಿ ಭೂಪತಿ ಸಿಕ್ಕಿಬೀಳುತ್ತಿದ್ದಂತೆ ಉಳಿದ ಆರೋಪಿಗಳು ತಿರುಪುರ್ ಪಕ್ಕದ ವೆಡಿಯಲೂರು ಎಂಬಲ್ಲಿ ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಈ ಮಾಹಿಯನ್ನು ತಿರುಪೂರ್‌ನಲ್ಲಿದ್ದ ಮತ್ತೊಂದು ತಂಡಕ್ಕೆ ರವಾನಿಸಿದ್ದರು.

ಅದರಂತೆ ವೆಡಿಯಲೂರು ಗ್ರಾಮದ ಶೆಡ್‌ನಲ್ಲಿ ಮಲಗಿದ್ದ ಮುರುಗೇಶ್, ಅರವಿಂದ್, ಜೋಸೆಫ್, ಅಪ್ರಾಪ್ತ ಬಾಲಕನನ್ನು ಬಂಧಿಸುವಲ್ಲಿ ಆ ತಂಡ ಯಶಸ್ವಿಯಾಗಿದೆ. ಒಂದು ವೇಳೆ ಭೂಪತಿ ಸಿಗದೆ ಇದ್ದರೆ ಈ ನಾಲ್ವರ ಬಂಧನ ಮತ್ತಷ್ಟು ವಿಳಂಬವಾಗುತ್ತಿತ್ತು. ಪ್ರಕರಣದಲ್ಲಿ ಇನ್ನು ಇಬ್ಬರು ಭಾಗಿಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು