NEWSದೇಶ-ವಿದೇಶನಮ್ಮರಾಜ್ಯ

ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ರಾಜ್ಯದ 2 ಯೋಜನೆಗಳಿಗೆ ಪುರಸ್ಕಾರ: ರಾಕೇಶ್ ಸಿಂಗ್ ಹರ್ಷ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾರತದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಗಳ 6ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಅಂತರ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಕರ್ನಾಟಕ ರಾಜ್ಯದ 2 ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಪುರಸ್ಕಾರ ಲಭಿಸಿದೆ.

ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ವತಿಯಿಂದ ರಾಷ್ಟ್ರ ಮಟ್ಟದಲ್ಲಿ ನಡೆದ ಈ ವಿವಿಧ ಸ್ತರದ ಸ್ಪರ್ಧೆಗಳಲ್ಲಿ ತುಮಕೂರು ಸ್ಮಾರ್ಟ್ ಸಿಟಿಯ ಡಿಜಿಟಲ್ ಗ್ರಂಥಾಲಯ ಯೋಜನೆಗೆ ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನ ದೊರಕಿದೆ.

ಅದೇ ರೀತಿ ಕೋವಿಡ್ ತುರ್ತು ಪರಿಸ್ಥಿತಿಯ ನಿರ್ವಹಣೆಗೆ ನೀಡುವ ವಿಶೇಷ ಪುರಸ್ಕಾರ ಬೆಂಗಳೂರು ಸ್ಮಾರ್ಟ್ ಸಿಟಿಗೆ ಲಭಿಸಿದೆ. ಹಾಗೆಯೇ ಕಾಮಗಾರಿಗಳಲ್ಲಿ ಪದವೀಧರರಿಗೆ ಕೆಲಸ ನೀಡಿ ಇಂಟರ್ನ್ ಶಿಪ್ ನೀಡುವ ಯೋಜನೆಗೆ ಬೆಂಗಳೂರು ಸ್ಮಾರ್ಟ್ ಸಿಟಿಯನ್ನು ರನ್ನರ್ ಅಪ್ ಎಂದು ಘೋಷಿಸಲಾಗಿದೆ.

ಹವಾಮಾನ ಮೌಲ್ಯಮಾಪನಕ್ಕೆ ಸಂಬಂಧಿಸಿ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಗೆ ರಾಷ್ಟ್ರ ಮಟ್ಟದಲ್ಲಿ 3 ನಕ್ಷತ್ರಗಳನ್ನು ನೀಡಲಾಗಿದೆ.

ಈ ಪುರಸ್ಕಾರಗಳನ್ನು ಪಡೆದ ಬೆಂಗಳೂರು ಮತ್ತು ತುಮಕೂರು ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಹಿರಿಯ ಐಎಎಸ್ ಅಧಿಕಾರಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರೇ ಅಧ್ಯಕ್ಷರಾಗಿದ್ದು, ಸ್ಮಾರ್ಟ್ ಸಿಟಿ ಸಿಬ್ಬಂದಿ ವರ್ಗವನ್ನು ಅಭಿನಂದಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ