NEWSದೇಶ-ವಿದೇಶರಾಜಕೀಯ

ಶಾಸಕ ಸ್ಥಾನಕ್ಕೆ ರಾಜೀನಾಮೆ- ಮುಂಬೈನಲ್ಲಿ ತೀರ್ಮಾನ ಎಂದ ರಮೇಶ್‌ ಜಾರಕಿಹೊಳಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವನ್ನು ಮುಂಬೈನಲ್ಲಿ ತೀರ್ಮಾನಿಸಲಾಗುವುದು  ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಇಲ್ಲಿಗೆ ಬಂದಿರುವುದು ಸುತ್ತೂರು ಶ್ರೀಗಳನ್ನು ಭೇಟಿ ಮಾಡಲು. ಸಿಎಂ ಬಂದು ಭೇಟಿ ಮಾಡಿ ಎಂದಿರುವುದು ನನಗೆ ಗೊತ್ತಿಲ್ಲ. ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ದೈವಾದೀನರಾದ ಕಾರಣ ಇಲ್ಲಿಗೆ ಬಂದಿದ್ದೇನೆ ಎಂದು ತಿಳಿಸಿದರು.

ರಾಜೀನಾಮೆ ವಿಚಾರವಾಗಿ ಮಾತನಾಡಿದ ಜಾರಕಿಹೊಳಿ, ಸರ್ಕಾರ ತಂದವನು ನಾನು. ಸಚಿವ ಸ್ಥಾನ ಕೇಳುತ್ತೇನೆ. ಸಚಿವ ಸ್ಥಾನಕ್ಕಾಗಿ ನಾನು ಸ್ವಾಮೀಜಿಯವರನ್ನು ಭೇಟಿ ಮಾಡುತ್ತಿಲ್ಲ. ಈ ಬಗ್ಗೆ ಸ್ವಾಮೀಜಿಯವರನ್ನು ಭೇಟಿಯಾದ ಬಳಿಕ‌ ಮಾತಾಡುತ್ತೇನೆ. ರಾಜೀನಾಮೆ ವಿಚಾರ ಮುಂಬೈನಲ್ಲಿ ಹೋಗಿ ಮಾತಾಡುತ್ತೇನೆ ಎಂದರು.

ವಿಶೇಷ ವಿಮಾನ: ನಗರದ ಸುತ್ತೂರು ಮಠಕ್ಕೆ ಭೇಟಿ
ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ತನ್ನ ಸಹೋದರನ ಜತೆ ವಿಶೇಷ ವಿಮಾನದ ಮೂಲಕ ನಗರದ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ. ಗೋಕಾಕ್‌ನಲ್ಲಿರುವ ಗೃಹ ಕಚೇರಿಯಿಂದ ಹೊರಬಂದ ಜಾರಕಿಹೊಳಿ ನೇರವಾಗಿ ಸಹೋದರ ಲಖನ್‌ ಜಾರಕಿಹೊಳಿ ಮನೆಯಲ್ಲಿ ಕೆಲಹೊತ್ತು ಮಾತುಕತೆ ನಡೆಸಿದರು.

ನಂತರ ಅಲ್ಲಿಂದ ಲಖನ್‌, ಅಳಿಯ ಅಂಬಿರಾವ್‌ ಪಾಟೀಲ್‌ ಅವರೊಟ್ಟಿಗೆ ಬೆಳಗಾವಿ ಸಾಂಬ್ರಾ ವಿಮಾನಕ್ಕೆ ಬಂದಿಳಿದರು. ನಂತರ ವಿಮಾನದ ಮೂಲಕ ಮೈಸೂರಿಗೆ ಬಂದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಲು ರಮೇಶ್‌ ನಿರಾಕರಿಸಿದರು. ʻವಾಪಸ್ ಬಂದು ಎಲ್ಲವನ್ನೂ ಮಾತನಾಡುತ್ತೇನೆ. ಇವತ್ತು ಶ್ರೀಗಳನ್ನು ಭೇಟಿಯಾಗುತ್ತೇವೆʼ ಎಂದಷ್ಟೇ ಪ್ರತಿಕ್ರಿಯಿಸಿದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...