NEWSದೇಶ-ವಿದೇಶರಾಜಕೀಯ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ- ಶೇ.11ರಷ್ಟು ತುಟ್ಟಿ ಭತ್ಯೆ ಹೆಚ್ಚಳ: ಜು.1 ರಿಂದಲೇ ಅನ್ವಯ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಶೇ.11ರಷ್ಟು ತುಟ್ಟಿ ಭತ್ಯೆ (ಡಿಯರ್ ನೆಸ್ ಅಲೋಯನ್ಸ್) ಹಾಗೂ ಡಿಯರ್ ನೆಸ್ ರಿಲೀಫ್ ಹೆಚ್ಚಳ ಮಾಡುವ ಸಂಪುಟ ನಿರ್ಧಾರವನ್ನು ಜು.1 ರಿಂದ ಅನ್ವಯವಾಗುವಂತೆ ಜಾರಿಗೊಳಿಸಲು ಹಣಕಾಸು ಸಚಿವಾಲಯ ಆದೇಶ ನೀಡಿದೆ.

ಹೊಸ ನಿರ್ಧಾರ ಜಾರಿಗೆ ಬರುವುದರಿಂದ ಕೇಂದ್ರ ಸರ್ಕಾರದ ಉದ್ಯೋಗಿಗಳಿಹೆ ಹಾಗೂ ಪಿಂಚಣಿದಾರರಿಗೆ ಈ ವರೆಗೂ ಇದ್ದ ಶೇ.17 ರಷ್ಟು ಡಿಎ, ಡಿ.ಆರ್ ಈಗ ಶೇ.28 ಕ್ಕೆ ಏರಿಕೆಯಾಗಲಿದ್ದು ಕೇಂದ್ರ ಸರ್ಕಾರದ 48 ಲಕ್ಷ ಉದ್ಯೋಗಿಗಳು ಹಾಗೂ 65 ಲಕ್ಷ ಪಿಂಚಣಿದಾರರಿಗೆ ಮೂಲ ವೇತನದ ಶೇ.28 ರಷ್ಟು ಡಿ.ಎ, ಡಿಆರ್ ಏರಿಕೆಯಾಗಿ ಲಾಭವಾಗಲಿದೆ.

2020 ರ ಜನವರಿ 1, 2020 ರ ಜುಲೈ 1 ಹಾಗೂ 2021 ರ ಜನವರಿ, 1 ರ ಕಂತುಗಳನ್ನೂ ಈ ಏರಿಕೆಯ ಮೊತ್ತ ಒಳಗೊಂಡಿರುತ್ತದೆ.

ರಕ್ಷಣಾ ಸೇವೆಗಳ ಅಂದಾಜು ಮೂಲಕ ವೇತನ ಪಡೆಯುತ್ತಿರುವ ನೌಕರರಿಗೂ ಈ ಆದೇಶ ಅನ್ವಯವಾಗಲಿದೆ. ಸೇನಾ ಪಡೆಗಳ ಸಿಬ್ಬಂದಿ ಮತ್ತು ರೈಲ್ವೆ ನೌಕರರಿಗೆ ಅದಕ್ಕೆ ಸಂಬಂಧಿಸಿದ ಸಚಿವಾಲಯಗಳಿಂದ ಪ್ರತ್ಯೇಕ ಆದೇಶ ಜಾರಿಯಾಗಲಿದೆ” ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ವರ್ಷ ಡಿಎ ಹೆಚ್ಚಳಕ್ಕೆ 2021 ರ ಜೂ.30 ರವರೆಗೂ ತಡೆಯೊಡ್ಡಿತ್ತು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?