NEWSದೇಶ-ವಿದೇಶರಾಜಕೀಯ

ತಾಲಿಬಾನ್ ಉಗ್ರರು ನಮ್ಮಂತೆ ಸಾಮಾನ್ಯ ನಾಗರಿಕರು: ಪಾಕ್‌ ಪ್ರಧಾನಿ ಇಮ್ರಾನ್ ಖಾನ್

ವಿಜಯಪಥ ಸಮಗ್ರ ಸುದ್ದಿ

ಇಸ್ಲಮಾಬಾದ್: ವಿಶ್ವದ ಅತಿ ಡೇಂಜರಸ್ ಉಗ್ರ ಸಂಘಟನೆಯಲ್ಲೊಂದಾದ ತಾಲಿಬಾನ್ ಉಗ್ರರಿಗೆ ಪಾಕಿಸ್ತಾನ ಆಶ್ರಯ ನೀಡುತ್ತಿದೆ ಎಂಬ ಆರೋಪ ಮೊದಲಿನಿಂದಲೂ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ತಾಲಿಬಾನ್ ಎಂಬುದು ಯಾವುದೇ ಮಿಲಿಟರಿ ಸಂಘಟನೆಯಲ್ಲ, ಅವರೂ ನಮ್ಮಂತೆ ಸಾಮಾನ್ಯ ನಾಗರಿಕರು. ಅವರನ್ನು ಪಾಕಿಸ್ತಾನ ಹೊಡೆದುರುಳಿಸಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ತಾಲಿಬಾನ್ ಉಗ್ರರ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅಫ್ಘಾನಿಸ್ತಾನದ ಗಡಿಯಲ್ಲಿ ಸೇನೆ ಮತ್ತು ತಾಲಿಬಾನ್ ನಡುವಿನ ಸಂಘರ್ಷ ಇನ್ನೂ ನಿಂತಿಲ್ಲ. ತಾಲಿಬಾನ್​ನ ದಾಳಿಯಿಂದ ಅನೇಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ನಡುವೆ ಪಾಕ್‌ ಪ್ರಧಾನಿ ಹೇಳಿಕೆ ಜನರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.

ಪಿಬಿಎಸ್ ನ್ಯೂಸ್​ ಜೊತೆಗೆ ನಡೆದ ದೀರ್ಘ ಸಂದರ್ಶನದಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರಿಸಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ಅಫ್ಘಾನಿಸ್ತಾನದ ವಿರುದ್ಧ ದಾಳಿ ನಡೆಸಲು ತಾಲಿಬಾನ್​ಗೆ ಪಾಕಿಸ್ತಾನ ಶಸ್ತ್ರಾಸ್ತ್ರ, ಹಣಕಾಸಿನ ಸಹಾಯ ನೀಡಿ, ಆಶ್ರಯ ನೀಡುತ್ತಿದೆ ಎಂಬ ಆರೋಪ ನಿರಾಧಾರ ಎಂದಿದ್ದಾರೆ.

ನಾವು ತಾಲಿಬಾನ್ ಉಗ್ರರಿಗೆ ಆಶ್ರಯ ನೀಡುತ್ತಿದ್ದೇವೆ ಎಂಬುದಕ್ಕೆ ಯಾರಾದರೂ ಸಾಕ್ಷಿ ನೀಡಲು ಸಿದ್ಧರಿದ್ದಾರಾ? ವಿನಾಕಾರಣ ನಮ್ಮ ದೇಶದ ಮೇಲೆ ಆರೋಪ ಮಾಡುವುದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪಾಕಿಸ್ತಾನದ ಗಡಿಯಲ್ಲಿ 3 ಮಿಲಿಯನ್ ಅಫ್ಘಾನಿಸ್ತಾನದ ಬಂದ ನಿರಾಶ್ರಿತರಿದ್ದಾರೆ. ಹೀಗಿರುವಾಗ ವೃಥಾ ಆರೋಪ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಪಾಕಿಸ್ತಾನದ ಗಡಿಯಲ್ಲಿರುವ 3 ಮಿಲಿಯನ್ ಅಫ್ಘಾನಿಸ್ತಾನದ ವಲಸಿಗರ ಪೈಕಿ ಬಹುತೇಕರು ಪಶ್ತೂನ್ ಸಮುದಾಯದವರಾಗಿದ್ದಾರೆ. ತಾಲಿಬಾನ್ ಸಂಘಟನೆಯಲ್ಲಿ ಇರುವವರೂ ಅದೇ ಸಮುದಾಯದವರಾಗಿದ್ದಾರೆ.

ತಾಲಿಬಾನ್ ಅನ್ನು ಒಂದು ಉಗ್ರ ಸಂಘಟನೆಯಂತೆ ಮಾತ್ರ ನೋಡಲಾಗುತ್ತಿದೆ. ಆದರೆ, ತಾಲಿಬಾನಿಗರಲ್ಲಿ ಅನೇಕರು ಸಾಮಾನ್ಯ ಜನರೂ ಇದ್ದಾರೆ. ಅವರನ್ನು ನಾವು ಹೊಡೆದುರುಳಿಸುವುದು ಸರಿಯೇ? ಅವರನ್ನು ಹೇಗೆ ಆತಂಕವಾದಿಗಳ ಪಟ್ಟಿಗೆ ಸೇರಿಸಲು ಸಾಧ್ಯ? ಅದು ತಪ್ಪಲ್ಲವೇ? ಎಂದು ಇಮ್ರಾನ್ ಖಾನ್ ಕೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಬೊಮ್ಮಾಯಿ ನಿರ್ಲಕ್ಷ್ಯದಿಂದ ಅಪರಾಧ ನಾಗಾಲೋಟದಲ್ಲಿ ಏರಿಕೆ: ಎಎಪಿ

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...