NEWSದೇಶ-ವಿದೇಶವಿದೇಶ

ಆಫ್ಘಾನಿಸ್ತಾನ ವಶಪಡಿಸಿಕೊಂಡ ತಾಲಿಬಾನಿಗಳ ಅಟ್ಟಹಾಸ ಇನ್ನೂ ನಿಂತಿಲ್ಲ

ವಿಜಯಪಥ ಸಮಗ್ರ ಸುದ್ದಿ

ಕಾಬೂಲ್: ಆಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳ ಅಟ್ಟಹಾಸ ಇನ್ನೂ ನಿಂತಿಲ್ಲ. ಭಾರತದ ರಾಜತಾಂತ್ರಿಕ ಕಚೇರಿಯಲ್ಲಿ ಮಹತ್ವದ ದಾಖಲೆಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ರಾಜತಾಂತ್ರಿಕ ಕಚೇರಿಯಲ್ಲಿದ್ದ ವಾಹನಗಳನ್ನು ಅವರು ವಶಪಡಿಸಿಕೊಂಡಿದ್ದು ಮಹತ್ವದ ದಾಖಲೆಗಳಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. ಹೆರತ್ ಮತ್ತು ಕಂದಹಾರ್‌ನಲ್ಲಿರುವ ಎರಡು ರಾಜತಾಂತ್ರಿಕ ಕಚೇರಿಯಲ್ಲಿ ತೀವ್ರ ಶೋಧ ನಡೆಸಿದ್ದಾರೆ. ಭಾರತದ 450 ಮಂದಿ ಇನ್ನು ಅಲ್ಲೆ ಇದ್ದು ಅವರ ಸ್ಥಿತಿ ಅತಂತ್ರವಾಗಿದೆ. ಅವರನ್ನು ಕರೆತರಲು ಸರ್ಕಾರಕ್ಕೆ ಸವಾಲಾಗಿದೆ.

ಅಮೆರಿಕ ಮತ್ತು ಇತರ ರಾಯಭಾರ ಕಚೇರಿಯ ಮೂಲಕ ಅವರನ್ನು ಕರೆಸಿಕೊಳ್ಳುವಲ್ಲಿ ವಿದೇಶಾಂಗ ಸಚಿವಾಲಯ ಪ್ರಯತ್ನ ನಡೆಸಿದೆ. ಅಲ್ಲಿನ ಭಾರತೀಯರನ್ನು ವಿಮಾನ ನಿಲ್ದಾಣದವರೆಗೂ ಕರೆತರುವುದು ಬಹಳ ಕಷ್ಟದಾಯಕವಾಗಿದೆ.

ಪ್ರತಿ ಚೆಕ್ ಪೋಸ್ಟ್‌ನಲ್ಲೂ ಬಂದೂಕುಧಾರಿ ತಾಲಿಬಾನಿಗಳು ತಪಾಸಣೆ ನಡೆಸುತ್ತಿದ್ದಾರೆ. ಅವರ ಒಪ್ಪಿಗೆ ಇಲ್ಲದೆ ಕಾಬೂಲನ್ನು ಬಿಟ್ಟು ಹೊರ ಬರಲಿಕ್ಕಾಗದೇ ಭಾರತೀಯರು ಮನೆಯೊಳಗೆ ಯಾತನೆ ಅನುಭವಿಸುತ್ತಿದ್ದಾರೆ.

ಕಾಬೂಲ್ ಏರ್‌ಪೋರ್ಟ್‌ ನಿಂದ ಭಾರತದ ರಾಯಭಾರ ಕಚೇರಿ ಹತ್ತು ಕಿಮೀ ದೂರ ಇದೆ. ಸದ್ಯಕ್ಕೆ ಏರ್‌ಪೋರ್ಟ್‌ ಸುತ್ತ ಅಮೆರಿಕ ಸೈನಿಕರ ಪಹರೆ ಇದೆ. ಆದರೆ ಏರ್ಪೋರ್ಟ್‌ ಬಿಟ್ಟು ಉಳಿದ ಕಡೆ ಅವರು ಇಲ್ಲ.

ಹಾಗಾಗಿ ತಾಲಿಬಾನಿಗಳ ಕಣ್ತಪ್ಪಿಸಿ ಬರಲು ಬಹಳ ಕಷ್ಟ. ಹೀಗಾಗಿ ತಾಲಿಬಾನಿಗಳ ಸ್ಥಳೀಯ ನಾಯಕರನ್ನು ಸಂಪರ್ಕಿಸುವುದು ಸವಾಲಾಗಿದೆ ಎಂದು ವರದಿಯಾಗಿದೆ. ಅದೂ ಅಲ್ಲದೆ ತಾಲಿಬಾನ್ ವಿರುದ್ಧ ಹೋರಾಡಿದ್ದ ಆಫ್ಘನ್‍ನ ಗುಪ್ತಚರ ಸಂಸ್ಥೆ ಸೈನಿಕರನ್ನು ತಾಲಿಬಾನಿಗಳು ಮನೆ ಮನೆಯಲ್ಲೂ ಹುಡುಕುತ್ತಿದ್ದಾರೆ. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ