NEWSದೇಶ-ವಿದೇಶರಾಜಕೀಯ

ಪೆಟ್ರೋಲ್‌ ಮೇಲಿನ ಸೆಸ್‌ ಇಳಿಸಿದ ತಮಿಳುನಾಡು ಸರ್ಕಾರ : ಲೀಟರ್‌ಗೆ 3 ರೂ.ಅಗ್ಗ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಪೆಟ್ರೋಲ್‌ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರಿಂದ ಜನ ಸಾಮಾನ್ಯ ತತ್ತರಿಸಿಹೋಗುತ್ತಿದ್ದಾನೆ. ಈ ದೃಷ್ಟಿಯಿಂದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯದ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ್ದು, ಪೆಟ್ರೋಲ್ ಮೇಲಿನ ಸೆಸ್ ಕಡಿಮೆ ಮಾಡಿದ್ದಾರೆ. ಇದರಿಂದ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಅಗ್ಗವಾಗಲಿದೆ.

ಮುಖ್ಯಮಂತ್ರಿ ಸ್ಟಾಲಿನ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಸೆಸ್ ಅನ್ನು ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿಮೆ ಮಾಡುತ್ತಿದೆ ಎಂದು ತಮಿಳುನಾಡು ಹಣಕಾಸು ಸಚಿವರು ತಿಳಿಸಿದ್ದಾರೆ.

ಸೆಸ್ ಕಡಿಮೆ ಮಾಡಿರುವುದರಿಂದ ರಾಜ್ಯ ಸರ್ಕಾರಕ್ಕೆ 1160 ಕೋಟಿ ಆದಾಯ ನಷ್ಟವಾಗುತ್ತದೆ ಎಂದು ತಮಿಳುನಾಡು ಹಣಕಾಸು ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ವಿವರಿಸಿದ್ದಾರೆ.

ಡಿಎಂಕೆ ನೇತೃತ್ವದ ಸರ್ಕಾರ ಶುಕ್ರವಾರ ತನ್ನ ಮೊದಲ ಬಜೆಟ್‌ ಮಂಡಿಸಿತು. ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್‌ ಇದೇ ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಮಂಡಿಸಿದರು. ಈ ವೇಳೆ, ರಾಜ್ಯ ಸರ್ಕಾರಿ ನೌಕರರಿಗೆ ಏಪ್ರಿಲ್ 2022 ರಿಂದ ಜಾರಿಗೆ ಬರುವಂತೆ ಪರಿಷ್ಕೃತ ಡಿಎ ಹಾಗೂ ಮಹಿಳಾ ಪೌರಕಾರ್ಮಿಕರ ಹೆರಿಗೆ ರಜೆಯನ್ನು 9 ತಿಂಗಳಿಂದ 12 ತಿಂಗಳಿಗೆ ಹೆಚ್ಚಿಸುವುದು ಸೇರಿದಂತೆ ಹಲವು ಘೋಷಣೆಗಳನ್ನು ಮಾಡಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...