ಗೈಘಾಟಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದೊಳಗೆ ವಿಚಾರಣೆ ನಡೆಸುವ ನೆಪದಲ್ಲಿ ಬಾಂಗ್ಲಾದೇಶದ ಮಹಿಳೆಯನ್ನು ಕರೆತಂದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಎಸ್ಎಫ್ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗೈಘಾಟಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿ ಬಿಎಸ್ಎಫ್ ಸಬ್ ಇನ್ಸ್ಪೆಕ್ಟರ್ನನ್ನು ಗುರುವಾರ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
“ಜುಲೈ 27 ರ ರಾತ್ರಿ ಈ ಘಟನೆ ನಡೆದಿದೆ. ಘಟನೆ ಬೆಳಕಿಗೆ ಬಂದ ನಂತರ, ಸ್ವತ ಬಿಎಸ್ಎಫ್, ಆರೋಪಿ ಸಿಬ್ಬಂದಿಯನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಿ ಅಮಾನತುಗೊಳಿಸಿದೆ ಎಂದು ಅರೆ ಸೇನಾ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತೆ ಹಾಗೂ ಇನ್ನೊಬ್ಬ ಮಹಿಳೆ, ಬಾಂಗ್ಲಾದೇಶದ ಗೋಪಾಲ್ ಗಂಜ್ ಮೂಲದವರಾಗಿದ್ದು, ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುವಾಗ ಬಂಧಿಸಲಾಗಿದೆ.
ಮಹಿಳೆ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಇಬ್ಬರು ಮಹಿಳೆಯರನ್ನು ಬಿಎಸ್ಎಫ್ನ 158 ನೇ ಬೆಟಾಲಿಯನ್ ಸಿಬ್ಬಂದಿ ಬಂಧಿಸಿದ್ದಾರೆ, ಅವರು ಕಾನೂನುಬಾಹಿರವಾಗಿ ಜೌಡಂಗಾ ಗಡಿಯ ಮೂಲಕ ಭಾರತ ಪ್ರವೇಶಿಸಿಸಿದ್ದಾರೆ.
“ಬಿಎಸ್ಎಫ್ ಸಿಬ್ಬಂದಿ ಇಬ್ಬರೂ ಮಹಿಳೆಯರನ್ನು ಅರೆಸೇನಾ ಪಡೆಯ ಖರೆರ್ ಮಠ ಶಿಬಿರಕ್ಕೆ ವಿಚಾರಣೆಗಾಗಿ ಕರೆದೊಯ್ದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಯಾರೂ ಇಲ್ಲದಿದ್ದಾಗ ಆರೋಪಿ ಬಿಎಸ್ಎಫ್ ಸಬ್ ಇನ್ಸ್ಪೆಕ್ಟರ್ ಮಹಿಳೆಯನ್ನು ವಿಚಾರಣೆ ಮಾಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ಎಫ್ಐಆರ್ ಉಲ್ಲೇಖಿಸಿ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ರಾಜ್ಯ ಬಿಜೆಪಿಗರು ಬದ್ಧರಾಗಿರಬೇಕು: ಎಚ್ಡಿಕೆ ಆಗ್ರಹ