NEWSದೇಶ-ವಿದೇಶರಾಜಕೀಯ

ಉಡುಪಿ: ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಕೇಂದ್ರ ಸರರ್ಕಾರ ಇಂಧನ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಮತ್ತು ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿದೆ. ಹೀಗಾಗಿ ಪ್ರಧಾನಿ ಮೋದಿ ತಮ್ಮ ಅಧಿಕಾರದಿಂದ ಇಳಿಯಲಿ ಎಂದು ಜೆಡಿಎಸ್ ಆಗ್ರಹಿಸಿದೆ.

ಉಡುಪಿಯ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಜತಾದ್ರಿ ಮುಂಭಾಗದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಜಮಾವಣೆಗೊಂಡು ಕೇಂದ್ರ ಸರ್ಕಾರ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದಲ್ಲಿ ಬಿಜೆಪಿ ರಾಜ್ಯದಲ್ಲಿ ಬಿಜೆಪಿ ಜಿಲ್ಲೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಜನಕ್ಕೆ ಏನು ಪ್ರಯೋಜನ ಆಗಿದೆ? ರಾಷ್ಟ್ರೀಯ ಪಕ್ಷಗಳಿಗೆ ಜನರ ಹಿತ ಬೇಕಾಗಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಕೇಂದ್ರ- ರಾಜ್ಯ ಸರರ್ಕಾರ ತಜ್ಞರ ಅಭಿಪ್ರಾಯ ಸಲಹೆ ಪಡೆಯದೆ ದೇಶವನ್ನು ಮೃತ್ಯು ಕೂಪಕ್ಕೆ ತಳ್ಳಿದೆ. ಬೆಲೆ ನಿಯಂತ್ರಣ ಮಾಡಲು ವಿಫಲವಾದ ಪ್ರಧಾನಿ ಮೋದಿ ಅಧಿಕಾರದಲ್ಲಿರಲು ಸಮರ್ಥರಲ್ಲ. ಸಾಂಕ್ರಾಮಿಕ ಆವರಿಸಿಕೊಂಡಿರುವ ಈ ಕಾಲದಲ್ಲಿ ಬೆಲೆಯೇರಿಕೆ ಮಾಡಿ ಬಡವರು ಮಧ್ಯಮ ವರ್ಗದ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ತಿನ್ನುವ ಆಹಾರಕ್ಕೂ ದುಬಾರಿ ಬೆಲೆ, ಓಡಾಟ ಮಾಡುವ ಪೆಟ್ರೋಲಿಯಂ ವಸ್ತುಗಳಿಗೂ ದುಬಾರಿ ಬೆಲೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಕಿಡಿಕಾರಿದರು.

ಕಿಸಾನ್ ಎಂದು ಹೇಳುವ ಪ್ರಧಾನಿ ಮೋದಿ ಡೀಸೆಲ್ ಬೆಲೆ ಏರಿಕೆ ಮಾಡಿ ರೈತರು ಟ್ರ್ಯಾಕ್ಟರ್, ಟಿಲ್ಲರ್‌ನಲ್ಲಿ ಬೇಸಾಯ ಮಾಡಲು, ಆಹಾರ ವಸ್ತು ಸಾಗಾಟ ಮಾಡಲು ದುಬಾರಿ ಬೆಲೆ ತೆರುವಂತೆ ಮಾಡಿದ್ದು, ಸಾಧನೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಜನಜೀವನಕ್ಕೆ ತೊಡಕಾಗಿರುವ ಬೆಲೆ ಏರಿಕೆ ಇಳಿಸದಿದ್ದರೆ ಜೆಡಿಎಸ್ ಮತ್ತು ಮಿತ್ರಪಕ್ಷಗಳು ದೇಶವ್ಯಾಪಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ಜನರ ಭಾವನೆಗಳನ್ನು ಸರರ್ಕಾರದ ಗಮನಕ್ಕೆ ತನ್ನಿ ಎಂದು ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ಮನವಿ ಪತ್ರ ನೀಡಿದರು.

ಜೆಡಿಎಸ್ ಮುಖಂಡರಾದ ಬಾಲಕೃಷ್ಣ ಕಪ್ಪೆಟ್ಟು, ವಾಸುದೇವ, ಜಯಕುಮಾರ್ ಸುರೇಶ್ ದೇವಾಡಿಗ, ಶ್ರೀಕಾಂತ್, ಮನ್ಸೂರ್, ಹುಸೇನ್, ಜಯರಾಮ ಆಚಾರ್ಯ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು