NEWSದೇಶ-ವಿದೇಶವಿಜ್ಞಾನ

ಭಾರತದ ಹೆದ್ದಾರಿಗಳು ಟೋಲ್​ಬೂತ್ ಮುಕ್ತ : ಸಚಿವ ನಿತಿನ್ ಗಡ್ಕರಿ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ನ್ಯೂಡೆಲ್ಲಿ: ದೇಶಾದ್ಯಂತ ಹೆದ್ದಾರಿಗಳಲ್ಲಿ ತಡೆರಹಿತ ಸಂಚಾರಕ್ಕೆ ಅವಕಾಶ ಕಲ್ಪಿಸಲು ಟೋಲ್ ಸಂಗ್ರಹಕ್ಕೆ ಜಿಪಿಎಸ್ ಆಧಾರಿತ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಲಾಗಿದೆ. ಹೀಗಾಗಿ ಮುಂದಿನ 2 ವರ್ಷಗಳಲ್ಲಿ ಭಾರತದ ಎಲ್ಲ ಹೆದ್ದಾರಿಗಳನ್ನೂ ಟೋಲ್​ಬೂತ್ ಮುಕ್ತಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಟೋಲ್ ಬೂತ್​ನಲ್ಲಿ ಕಟ್ಟಬೇಕಾದ ಶುಲ್ಕವನ್ನು ಮುಂದಿನ ದಿನಗಳಲ್ಲಿ ಚಾಲಕರ ಬ್ಯಾಂಕ್ ಖಾತೆಯಿಂದಲೇ ಕಡಿತಗೊಳಿಸಲಾಗುತ್ತದೆ. ಇನ್ನೆರಡು ವರ್ಷಗಳಲ್ಲಿ ಇದು ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.

ಅಸೋಚಾಮ್ ಸಂಸ್ಥಾಪನಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಹನಗಳ ತಡೆರಹಿತ ಚಾಲನೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಿಪಿಎಸ್ ತಂತ್ರಜ್ಞಾನ ಆಧಾರಿತ ಟೋಲ್ ಶುಲ್ಕ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲಿದೆ ಎಂದು  ಮಾಹಿತಿ ನೀಡಿದರು.

ಜಿಪಿಎಸ್​ ತಂತ್ರಜ್ಞಾನದಿಂದ ವಾಹನಗಳ ಚಾಲನೆಯನ್ನು ಅವಲಂಬಿಸಿ ಆ ವಾಹನಗಳ ಮಾಲೀಕರ ಖಾತೆಯಿಂದಲೇ ಟೋಲ್ ಹಣವನ್ನು ಕಡಿತಗೊಳಿಸಲಾಗುವುದು. ಹಳೆಯ ವಾಹನಗಳಲ್ಲೂ ಜಿಪಿಎಸ್​ ಅಳವಡಿಸಲು ಸರ್ಕಾರ ನಿರ್ಧರಿಸಿದೆ. ಈಗ ಎಲ್ಲ ಕಮರ್ಷಿಯಲ್ ವಾಹನಗಳು ವಾಹನ ಟ್ರ್ಯಾಕಿಂಗ್ ವ್ಯವಸ್ಥೆಗಳೊಂದಿಗೆ ಬರುತ್ತಿವೆ. ಹಳೆ ವಾಹನಗಳಿಗೆ ಜಿಪಿಎಸ್ ತಂತ್ರಜ್ಞಾನ ಅಳವಡಿಸಲು ಕೇಂದ್ರ ಸರ್ಕಾರದಿಂದ ಯೋಜನೆ ರೂಪಿಸಲಾಗುತ್ತದೆ ಎಂದು ಗಡ್ಕರಿ ತಿಳಿಸಿದ್ದಾರೆ.

ಈ ಹಿಂದೆ ಎಲ್ಲಾ ವಾಹನಗಳಿಗೆ ಫಾಸ್ಟ್​ಟ್ಯಾಗ್​ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿತ್ತು. ಅದರ ಬೆನ್ನಲ್ಲೇ ಹೆದ್ದಾರಿಗಳನ್ನು ಟೋಲ್​ಬೂತ್​ ಮುಕ್ತಗೊಳಿಸುವ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದೆ. ಇನ್ನು 2021ರ ಮಾರ್ಚ್ ವೇಳೆಗೆ ಟೋಲ್ ಸಂಗ್ರಹ 34 ಸಾವಿರ ಕೋಟಿ ರೂ. ಆಗಬಹುದು. ಟೋಲ್ ಸಂಗ್ರಹಕ್ಕೆ ಜಿಪಿಎಸ್ ತಂತ್ರಜ್ಞಾನವನ್ನು ಬಳಸುವ ಮೂಲಕ ಮುಂದಿನ 5 ವರ್ಷಗಳಲ್ಲಿ ಟೋಲ್ ಆದಾಯವನ್ನು 1,34,000 ಕೋಟಿ ರೂ.ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್