NEWSನಮ್ಮರಾಜ್ಯರಾಜಕೀಯ

ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬುವುದು ಅಪ್ಪಟ ಸುಳ್ಳು: ಬಿಜೆಪಿ ವಿರುದ್ಧ ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ ಎಂದು ಕಡಕ್ಕಾಗಿ ಎಚ್ಚರಿಕೆಯ ಸಂದೇಶವನ್ನು ಬಿಜೆಪಿಗರಿಗೆ ಟ್ವೀಟ್‌ ಮೂಲಕ ರವಾನಿಸಿದ್ದಾರೆ.

ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ ಎಂದು ಗುಡುಗುದ್ದಾರೆ.

1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್