Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆ

ಹೊಸ ವಾಹನ ಖರೀದಿಗೂ ಮುನ್ನ ಇದಕ್ಕೆ ಸಹಿ ಹಾಕಲೇ ಬೇಕು !

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೊಸ ವಾಹನ ಖರೀದಿ ಮಾಡುವರು ಕಡ್ಡಾಯವಾಗಿ ಪಾರ್ಕಿಂಗ್‌ಗೆ ಸ್ಥಳಾವಕಾಶವಿದೆ ಎಂಬ ಬದ್ಧತಾ ಪ್ರಮಾಣ ಪತ್ರವನ್ನು ಸಲ್ಲಿಸಬೆಕು. ಇಂತದ್ದೊಂದು ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಅದರ ಸಾಧಕ ಭಾದಕ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಬಿಡಿಎ ಅಧ್ಯಕ್ಷ ಎಸ್‌.ಆರ್‌. ವಿಶ್ವನಾಥ್‌ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಬೆಂಗಳೂರಲ್ಲಿ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಭವಿಷ್ಯದ ದೃಷ್ಟಿಯಿಂದ ಅವೈಜ್ಞಾನಿಕ ವಾಹನ ನಿಲುಗಡೆ ತಪ್ಪಿಸಬೇಕಿದೆ. ಹೀಗಾಗಿ ಹೊಸ ಪಾರ್ಕಿಂಗ್ ನೀತಿ ತರಲು ನಿರ್ಧರಿಸಲಾಗಿದೆ ಎಂದು ಸಭೆ ಬಳಿಕ ಸುದ್ದಿಗಾರರಿಗೆ ವಿಶ್ವನಾಥ್‌ ತಿಳಿಸಿದರು.

ಬೆಂಗಳೂರಿನಲ್ಲಿ ದಿನೇದಿನೆ ವಾಹನಗಳ ಹೆಚ್ಚುತ್ತಿದೆ. ಪಾರ್ಕಿಂಗ್ ಸಮಸ್ಯೆ ಉಲ್ಭಣಿಸುತ್ತಿದ್ದು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಒಂದು ಕಠಿಣ ಪಾರ್ಕಿಂಗ್ ನೀತಿ ತರಲಾಗುತ್ತಿದ್ದು, ಇದರ ಅನ್ವಯ ಹೊಸ ವಾಹನ ಖರೀದಿಸುವ ಸಾರ್ವಜನಿಕರು ಪಾರ್ಕಿಂಗ್ ಮಾಡಲು ಸ್ಥಳಾವಕಾಶವಿದೆ ಎಂಬ ಬದ್ಧತಾ ಪತ್ರಕ್ಕೆ ಸಹಿ ಹಾಕಿದರೆ ಮಾತ್ರ ವಾಹನ ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂದರು.

ನಗರದಲ್ಲಿಪಾರ್ಕಿಂಗ್ ವ್ಯವಸ್ಥೆ ಸರಿಯಿಲ್ಲ. ಬಹುತೇಕ ಕಡೆ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುತ್ತಾರೆ. ಇದರಿಂದ ಜನ ತೊಂದರೆ ಅನುಭವಿಸುತ್ತಿದ್ದು, ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ. ಸಮಸ್ಯೆ ಪರಿಹರಿಸುವ ಭಾಗವಾಗಿ ಹೊಸ ಪಾರ್ಕಿಂಗ್ ನೀತಿ ಕಟ್ಟು ನಿಟ್ಟಾಗಿ ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದರು.

ರಸ್ತೆಯಲ್ಲಿಯೇ ವಾಹನ ನಿಲ್ಲಿಸುವ ಪರಿಪಾಠಕ್ಕೆ ಕಡಿವಾಣ ಹಾಕಲಾಗುತ್ತದೆ. ಆದರೆ ಕೆಲವು ಕಡೆ ಮನೆ ಮುಂದೆ, ರಸ್ತೆ ಬದಿ ವಾಹನ ನಿಲ್ಲಿಸುತ್ತಾರೆ. ಸಾರ್ವಜನಿಕ ಪ್ರದೇಶದಲ್ಲಿ ಬೆಳಗ್ಗೆ ವಾಹನ ನಿಲ್ಲಿಸಿದರೆ ಸಂಜೆ ನಂತರವೇ ತೆರೆಯಲಾಗುತ್ತದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದು, ನಗರದಲ್ಲಿ ಪ್ರಸ್ತುತ 85 ಕಡೆ ಸ್ಮಾರ್ಟ್‌ ಪಾರ್ಕಿಂಗ್ ಕೇಂದ್ರ ಸ್ಥಾಪಿಸಲಾಗಿದೆ. ಇದೇ ರೀತಿ ಎಲ್ಲಾ ಕಡೆ ಶುಲ್ಕ ಸಂಗ್ರಹ ಸ್ಮಾರ್ಟ್‌ ಪಾರ್ಕಿಂಗ್ ಕೇಂದ್ರ ತೆರೆಯುವ ಅಗತ್ಯವಿದೆ ಎಂದು ಹೇಳಿದರು. ಮುಖ್ಯ ಕಾರ್ಯದರ್ಶಿಗಳು ಅಧ್ಯಯನ ನಡೆಸಿ ವರದಿ ನೀಡಲಿದ್ದು, ಅದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವಿಶ್ವನಾಥ್ ವಿವರಿಸಿದರು.

ಬಿ ಟ್ರ್ಯಾಕ್ : ರಾಜಧಾನಿಯ ರಸ್ತೆಗಳಲ್ಲಿ ಅಪಘಾತ ರಹಿತ ವೈಜ್ಞಾನಿಕ ಸಿಗ್ನಲ್ ನಿರ್ವಹಣೆಗಾಗಿ ಸರ್ಕಾರ ನೂರಾರು ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ 85 ಲಕ್ಷ ದಾಟಿದೆ. ಹೀಗಾಗಿ ಸಂಚಾರ ದಟ್ಟಣೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಬಿ ಟ್ರ್ಯಾಕ್ ಯೋಜನೆ ಈಗಾಗಲೇ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ