ಬಳ್ಳಾರಿ: ಉತ್ತರ ಕರ್ನಾಟಕದ ಹಿರಿಯ ವೀರಶೈವ ಲಿಂಗಾಯತ ಇಬ್ಬರು ಜಗದ್ಗುರುಗಳು ಇಂದು ಮುಂಜಾನೆ ಲಿಂಗೈಕ್ಯರಾಗಿದ್ದಾರೆ
ಜಗದ್ಗುರುಗಳಾಗಿದ್ದ ಡಾ.ಸಂಗನ ಬಸವ ಮಹಾಸ್ವಾಮಿ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಅಪೋಲೊ ಅಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.30 ಕ್ಕೆ ಲಿಂಗೈಕ್ಯರಾಗಿದ್ದಾರೆ.
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಕೊಟ್ಟೂರು ಮಠ ಸಂಸ್ಥಾನದ ಜಗದ್ಗುರು ಡಾ.ಸಂಗನ ಬಸವ ಮಹಾಸ್ವಾಮಿ(87) ಮತ್ತು ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ.ಅಭಿನವ ಅನ್ನದಾನ ಸ್ವಾಮೀಜಿ(85) ಕೂಡ ಲಿಂಗೈಕ್ಯರಾಗಿದ್ದಾರೆ.
ಶಿಕ್ಷಣ ಸಂಸ್ಥೆಗಳ ಮೂಲಕ ತ್ರಿವಿಧ ದಾಸೋಹಿಯಾಗಿದ್ದ ಡಾ.ಸಂಗನ ಬಸವ ಮಹಾಸ್ವಾಮಿ ಹಾನಗಲ್ಲ ಶಿವಯೋಗ ಮಂದಿರದ ಅಧ್ಯಕ್ಷರಾಗಿದ್ದರು. ಬಸವಾದಿ ಶರಣರ ವಚನಗಳನ್ನ ನಾಡಿನಾದ್ಯಂತ ಪಸರಿಸುವ ಕಾಯಕದಲ್ಲಿ ನಿರತರಾಗಿದ್ದರು.
ಹೊಸಪೇಟೆ ,ಬಳ್ಳಾರಿ, ಗದಗ ಬಾಗಲಕೋಟೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬಡವರಿಗೆ ಅನ್ನ ಅಕ್ಷರ ದಾಸೋಹ ನೀಡುತ್ತಿದ್ದರು. ಬಸವ ತತ್ವದ ಮೂಲ ದೀನದಲಿತರ ಕಲ್ಯಾಣಕ್ಕೆ ಶ್ರಮಿಸಿದ್ದ ಶ್ರೀಗಳು ಕಾವಿಧಾರಿಯಾಗಿ ಮಠಕ್ಕೆ ಸೀಮಿತವಾಗಿರದೆ ಜನಪರ ವಿಚಾರಧಾರೆಗಳನ್ನು ಹೊಂದಿದ್ದರು.
ಭಕ್ತರ ಅಪೇಕ್ಷೆಯಂತೆ ಇಳಕಲ್ ಗಡದ ಹಾಲಕೆರೆ ಮಠದಲ್ಲಿ ವೀರಶೈವ ಲಿಂಗಾಯತ ಧರ್ಮದ ವಿಧಿವಿಧಾನದಂತೆ ಇಂದು ಶ್ರೀಗಳ ಅಂತ್ಯಕ್ರಿಯೆ ಕಾರ್ಯ ನಡೆಯಲಿದೆ.
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಡಾ ಅಭಿನವ ಅನ್ನದಾನ ಸ್ವಾಮೀಜಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.
ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠ ಹೊಸಪೇಟೆ, ಬಳ್ಳಾರಿಯ ಕೊಟ್ಟೂರು ಸ್ವಾಮಿಮಠ, ಶ್ರೀಮದ ಶಿವಯೋಗಿ ಮಂದಿರದ ಅಧ್ಯಕ್ಷರಾಗಿದ್ದರು. ಇಂದು ಸಂಜೆ ಅಥವಾ ನಾಳೆ ಹಾಲಕೆರೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.