Vijayapatha – ವಿಜಯಪಥ
Saturday, November 2, 2024
NEWSದೇಶ-ವಿದೇಶರಾಜಕೀಯಸಂಸ್ಕೃತಿ

ಜೈ ಶ್ರೀರಾಮ್ ಘೋಷಣೆ: ಭಾಷಣ ಮಾಡದೆ ನಿರ್ಗಮಿಸಿದ ಸಿಎಂ ದೀದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲ್ಕತಾ: ಮಮತಾ ಬ್ಯಾನರ್ಜಿ ಅವರು ಭಾಷಣ ಮಾಡಲು ಆಗಮಿಸಿದ್ದ ವೇಳೆ ಅಲ್ಲಿದ್ದವರೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರಿಂದ ದೀದಿ ಭಾಷಣ ಮಾಡದೆ ಅಲ್ಲಿ ನಡೆದುಕೊಂಡವರ ವರ್ತನೆಯನ್ನು ಖಂಡಿಸಿ ತೆರಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನೇತಾಜಿ ಸುಭಾಷ್ ಚಂದ್ರಬೋಸ್ ರ 125 ಜನ್ಮದಿನಾಚರಣೆಯ ಅಂಗವಾಗಿ ದೇಶಾದ್ಯಂತ ಪರಾಕ್ರಮ ದಿನ ಎಂದು ಆಚರಿಸಲಾಗುತ್ತಿದೆ. ಹೀಗಾಗಿ ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಯಲ್ಲಿ ಇದ್ದರು.

ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭಾಷಣ ಮಾಡಲು ಆಹ್ವಾನಿಸಲಾಯಿತು. ಅವರು ಮೈಕ್ ಮುಂದೆ ಬರುತ್ತಿದ್ದಂತೆ ಅಲ್ಲಿದ್ದ ಕೆಲವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.

ಆ ಕೆಲವರ ವರ್ತನೆಯಿಂದ ಬೇಸರಗೊಂಡ ಮಮತಾ ಬ್ಯಾನರ್ಜಿ ಅವರು, ನಿಮ್ಮ ವರ್ತನೆಯನ್ನು ನಾನು ಖಂಡಿಸುತ್ತೇವೆ. ಹೀಗಾಗಿ ನಾನು ಭಾಷಣ ಮಾಡುವುದಿಲ್ಲ. ಭಾಷಣ ಮಾಡಲು ಕರೆಸಿ ಈ ರೀತಿ ಅಪಮಾನ ಮಾಡುವುದು ಸರಿಯಲ್ಲ. ಇದು ಸರ್ಕಾರಿ ಕಾರ್ಯಕ್ರಮ. ಯಾವುದೇ ಒಂದು ಪಕ್ಷದ ಕಾರ್ಯಕ್ರಮವಲ್ಲ ಎಂದು ಹೇಳಿ ನಿರ್ಗಮಿಸಿದರು.

ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸುಭಾಷ್ ಚಂದ್ರಬೋಸ್ ಕುರಿತಂತೆ ಭಾಷಣ ಮಾಡಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ