NEWSದೇಶ-ವಿದೇಶರಾಜಕೀಯ

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಜಿ.ಸಿ. ಮುರ್ಮು ರಾಜೀನಾಮೆ?

ವಿಜಯಪಥ ಸಮಗ್ರ ಸುದ್ದಿ

ಶ್ರೀನಗರ್: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಆಲ್ ಇಂಡಿಯಾ ರೇಡಿಯೋ ಸುದ್ದಿ ಬಿತ್ತರಿಸಿವೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಮುರ್ಮು ಅವರು ರವಾನಿಸಿದ್ದಾರೆ. ಆದರೆ, ರಾಜೀನಾಮೆ ಅಂಗೀಕಾರವಾಗಿದೆಯೇ ಅಥವಾ ತಿರಸ್ಕಾರವಾಗಿದೆಯೇ ಎಂಬ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

ಜಿ.ಸಿ. ಮುರ್ಮು 1985 ರ ಬ್ಯಾಚ್ ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವಿಸ್ (ಐಎಎಸ್) ಗುಜರಾತ್ ಕೇಡರ್ ಅಧಿಕಾರಿಯಾಗಿದ್ದು, ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಮೋದಿ ಪ್ರಧಾನಿಯಾದ ನಂತರ ಇರುವ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಗೆ ನಿಯೋಜನೆಗೊಂಡಿದ್ದರು.

ಕಳೆದ ನವೆಂಬರ್‌ 30 ರಂದು ಮುರ್ಮು ನಿವೃತ್ತರಾಗಬೇಕಿತ್ತು. ಅಷ್ಟರೊಳಗೆ ಅಕ್ಟೋಬರ್‌ನಲ್ಲಿ ಅವರನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಆಗಿ ನೇಮಿಸಲಾಗಿತ್ತು. ಸದ್ಯ ಪ್ರಸ್ತುತ ಭಾರತದ ಕಂಟ್ರೋಲರ್ ಆಡಿಟರ್ ಜನರಲ್ (ಸಿಎಜಿ) ಹುದ್ದೆಗೆ ಮುರ್ಮು ಮುಂಚೂಣಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ವರ್ಷ ಆಗಸ್ಟ್‌ 5ರಂದು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ರ ಅಡಿಯಲ್ಲಿ ಹಿಂದಿನ ರಾಜ್ಯದ ವಿಶೇಷ ಸ್ಥಾನಮಾನ 370ನೇ ವಿಧಿಯನ್ನು ರದ್ದುಪಡಿಸಿ ನಂತರ ಅವರನ್ನು  ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್-ಗವರ್ನರ್ ಆಗಿ ನೇಮಿಸಲಾಯಿತ್ತು.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ