NEWSನಮ್ಮರಾಜ್ಯರಾಜಕೀಯ

ಉಕ ಭಾಗಗಳಲ್ಲಿ ಜೆಡಿಎಸ್ ದುರ್ಬಲ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಉಪಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕದ ಭಾಗಗಳಲ್ಲಿ ಜೆಡಿ(ಎಸ್) ದುರ್ಬಲವಾಗಿದೆ. ಈ ಹಿನ್ನೆಲೆಯಲ್ಲಿ ತಮಗಿರುವ ಅಲ್ಪಸ್ವಲ್ಪ ಬಲವನ್ನು ಬಿಜೆಪಿಗೆ ಧಾರೆಯೆರೆದು ಆ ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜೆಡಿ(ಎಸ್) ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ ಕುಲಶಾಸ್ತ್ರ ಅಧ್ಯಯನ ಮಾಡುವಂತೆ ನಾನು ಮುಖ್ಯಮಂತ್ರಿಯಾಗಿದ್ದಾಗ ಆದೇಶಿಸಿದ್ದೆ, ಈಗಲೂ ಅಧ್ಯಯನ ನಡೆಯುತ್ತಿದೆ, ಅದು ಮುಗಿದು ವರದಿ ಬಂದ ನಂತರ ಸರ್ಕಾರದ ಮೇಲೆ ಒತ್ತಾಡ ಹೇರಬೇಕು. ಈಗಲೇ ಸಮಾವೇಶ, ರ‍್ಯಾಲಿಗಳು ಅನಗತ್ಯ ಅನ್ನೋದು ನನ್ನ ಅನಿಸಿಕೆ ಎಂದು ತಿಳಿಸಿದ್ದಾರೆ.

ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್.ಎಸ್.ಎಸ್ ಮತ್ತು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಕುರುಬ ಸಮುದಾಯವನ್ನು ಒಡೆಯುವುದೇ ಅವರ ಮುಖ್ಯ ಉದ್ದೇಶ. ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ ವಿರುದ್ಧವಲ್ಲವೇ? ಅರ್ಥವಾಗೋಕೆ ಇದಕ್ಕಿಂತ ಹೆಚ್ಚು ಬೇಕಾ ಎಂದು ಪ್ರಶ್ನಿಸಿದ್ದಾರೆ.

5 ವರ್ಷ ಮುಖ್ಯಮಂತ್ರಿಯಾಗಿ ನಾಡಿನ ಶೋಷಿತ ಸಮುದಾಯಗಳಿಗಾಗಿ ಏನೆಲ್ಲಾ ಕೆಲಸ ಮಾಡಿದ್ದೇನೆ ಎಂದು ಜನರಿಗೆ ಗೊತ್ತು. ನನ್ನ ಕೆಲಸದ ಬಗ್ಗೆ ಸರ್ಟಿಫಿಕೇಟ್ ಕೊಡೋಕೆ ಈಶ್ವರಪ್ಪ ಯಾರು? ಅವರು ಕೊಡೋ ಸರ್ಟಿಫಿಕೇಟ್ ಅಗತ್ಯ ನನಗಿಲ್ಲ. ತಮ್ಮ ಸರ್ಕಾರ ಏನು ಮಾಡಿದೆ ಎಂದು ಅವರು ಹೇಳಬೇಕು ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್