NEWSನಮ್ಮರಾಜ್ಯರಾಜಕೀಯ

ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ: ಸಿದ್ದುಗೆ ಎಚ್‌ಡಿಕೆ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್‌ನ ಜಾತ್ಯತೀತತೆ ಬಹಿರಂಗವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ಈ ವೇಳೆಯಲ್ಲಿ ತಿಳಿಯ ಬಯಸುತ್ತೇನೆ. ಕಾಂಗ್ರೆಸ್‌ನ ಅಪವ್ಯಾಖ್ಯಾನದಿಂದಲೇ ಇಂದು ಜಾತ್ಯತೀತೆಯನ್ನು ಅನುಮಾನಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ

ಸಭಾಪತಿ ಅವಿಶ್ವಾಸ ನಿರ್ಣಯದ ವೇಳೆ ಬೆಂಬಲ ನೀಡುವಂತೆ ಕಾಂಗ್ರೆಸ್‌ನ ಯಾವ ನಾಯಕನೂ ಸೌಜನ್ಯಕ್ಕೂ ಜೆಡಿಎಸ್ ಬಳಿ ಚರ್ಚಿಸಿಲ್ಲ. ಹೀಗಿದ್ದೂ, ಜೆಡಿಎಸ್‌ನ. ಜಾತ್ಯತೀತತೆಯ ಪರೀಕ್ಷೆ ನಡೆಯುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ದುರಹಂಕಾರದ್ದು. ಬೆಂಬಲ ಕೇಳದಿದ್ದರೂ ಬೆಂಬಲಿಸಲು ನಾವೇನು ಗುಲಾಮರಲ್ಲ. ಕಾಂಗ್ರೆಸ್ಸಿನ ದೌಲತ್ತೇ ಅದರ ದುಸ್ಥಿತಿಗೆ ಕಾರಣ ಎಂದು ಸರಣಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಧರ್ಮ, ದೇವರಲ್ಲಿ ಆಳ ನಂಬಿಕೆ ಹೊಂದಿಯೂ, ಎಲ್ಲರ ನಂಬಿಕೆಗಳನ್ನು ಗೌರವಿಸುವುದು, ಎಲ್ಲರನ್ನೂ ಸಮಾನವಾಗಿ ಕಾಣುವುದು” ದೇವೇಗೌಡರ ಜಾತ್ಯತೀತೆ ಎಂಬುದನ್ನು ಸಂದರ್ಭ ಸಿಕ್ಕಾಗ ಹೇಳಿದ್ದೇನೆ. ಆದರೆ ಕಾಂಗ್ರೆಸ್, ಸಿದ್ದರಾಮಯ್ಯರ ವ್ಯಾಖ್ಯಾನ ಇದಕ್ಕೆ ವಿರುದ್ಧವಾದದ್ದು. ಜಾತಿಗಳನ್ನು ಒಡೆಯುವುದು, ಅನಗತ್ಯ ಓಲೈಕೆಯೇ ಅವರ ಜಾತ್ಯತೀತತೆ ಎಂದು ಹೇಳಿದ್ದಾರೆ.

ಒಳ್ಳೆ ಇಮೇಜ್ ಅನ್ನು ಚುನಾವಣೆ ಮತ್ತು ಸ್ಥಾನಗಳಿಕೆ ಮೇಲೆ ಲೆಕ್ಕ ಹಾಕಿದ್ದಾರೆ ಸಿದ್ದರಾಮಯ್ಯನವರು. ಹಾಗಾದರೆ ದೇಶದ ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್‌ನ ಇಮೇಜ್ ಕತೆ ಏನು? 2018ರ ಚುನಾವಣೆಯಲ್ಲಿ 120 ರಿಂದ 80ಕ್ಕೆ ಕುಸಿದ, ಸ್ವತಃ ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯನವರಿಗೆ ಇಮೇಜ್ ಇತ್ತೇ? ಇಮೇಜ್ ಇರುವುದು ನಮ್ಮ ಒಳ್ಳೆತನದಲ್ಲಿ ಎಂದು ನೆನಪಿಸಿದ್ದಾರೆ.

ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂಬ ಕಾಂಗ್ರೆಸ್ಸಿಗರ ಸವಕಲು ಆರೋಪಕ್ಕೆ ಈ ಹಿಂದೆಯೇ ಉತ್ತರ ನೀಡಿದ್ದೇನೆ. ಈಗಲೂ ಹೇಳುತ್ತೇನೆ. ಕಾಂಗ್ರೆಸ್ಸೇ ಜೆಡಿಎಸ್‌ನ ಬಿ ಟೀಂ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಪಕ್ಕದಲ್ಲಿ ಆವರಣ(ಬ್ರಾಕೆಟ್) ಹಾಕಿ ಅದರಲ್ಲಿ ಜೆಡಿಎಸ್ ಎಂದು ಬರೆದಾಗಷ್ಟೇ ಅದರ ಹೆಸರು ಪೂರ್ಣವಾಗುತ್ತದೆ. ಅಷ್ಟರ ಮಟ್ಟಿಗೆ ಅಲ್ಲಿ ಜೆಡಿಎಸ್ ಇದೆ ಎಂದಿದ್ದಾರೆ.

ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದು ಹೈಕಮಾಂಡ್ ಎಂದು ಹೇಳಿದ್ದಾರೆ ಸಿದ್ದರಾಮಯ್ಯ. ಅಂದರೆ ಹೈಕಮಾಂಡ್‌ನ ನಿರ್ಣಯ ತಮಗೆ ಇಷ್ಟವಿರಲಿಲ್ಲ ಎಂಬುವುದು ಸಿದ್ದರಾಮಯ್ಯ ಅವರ ಮಾತಿನಲ್ಲಿ ಧ್ವನಿಸುತ್ತಿರುವ ಅರ್ಥ. ಹೀಗಾಗಿಯೇ ಸಿದ್ದರಾಮಯ್ಯ ಸರ್ಕಾರ ಕೆಡವಿದರು.ಅದರ ಅಪವಾದ ಬೇರೆಯವರಿಗೆ ಬಳಿದರು ಎಂದು ಕುಟುಕಿದ್ದಾರೆ.

ಜಾತ್ಯತೀತ ನಿಲುವಿನ ಬಗ್ಗೆ! ದೇವೇಗೌಡರ ಬದ್ದತೆ ಬಗ್ಗೆ ನಾವು ನಿಮ್ಮಿಂದ ಉಪದೇಶ ಕೇಳಬೇಕಿಲ್ಲ. ದೇವೇಗೌಡರ ಬದ್ಧತೆಯನ್ನು ಬಳಸಿಕೊಂಡು ಬ್ಲ್ಯಾಕ್ಮೇಲ್ ಮಾಡಿದ ಕಾಂಗ್ರೆಸ್ ಇವತ್ತು ಜೆಡಿಎಸ್ ನ ನಿಲುವನ್ನು ಪ್ರಶ್ನಿಸುವ ಯಾವ ನೈತಿಕತೆ ಉಳಿಸಿಕೊಂಡಿದೆ ಎಂದು ಪ್ರಶ್ನಿಸಿದ್ದಾರೆ.

ಇನ್ನು ಫೈವ್ ಸ್ಟಾರ್ ಸಂಸ್ಕೃತಿ ಬಗ್ಗೆ ರಾಗ ಎಳೆದಿದ್ದಿರಿ? ಫೈವ್ ಸ್ಟಾರ್ ಹಾಗೂ ಗುಡಿಸಲಿನಿಂದಲೂ ಅಧಿಕಾರ ನಡೆಸಿದ್ದೇನೆ.ಜನತೆಗೆ ನನ್ನಷ್ಟು ಸುಲಭವಾಗಿ ದಕ್ಕುವ ರಾಜಕಾರಣಿ ಮತ್ತೊಬ್ಬರಿಲ್ಲ ಎಂಬುವುದನ್ನು ನೆನಪಿಸಲು ಬಯಸುತ್ತೇನೆ. ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ ರಾಜ್ಯದ ಇಂದಿನ ರಾಜಕಾರಣದ ಅಯೋಮಯ ಸ್ಥಿತಿಗೆ ನಿಮ್ಮ ದ್ವಂದ್ವ ಹಾಗೂ ಇಬ್ಬಂದಿತನದ ನಿಲುವೇ ಕಾರಣ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ