NEWSನಮ್ಮರಾಜ್ಯರಾಜಕೀಯ

ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ.

ಜೆಡಿಎಸ್ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ,ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ ಎಂದು ಹೇಳಿದ್ದಾರೆ.

ರೈತರ ಸಾಲಮನ್ನಾ’, ‘ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್‌ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...