NEWSನಮ್ಮರಾಜ್ಯರಾಜಕೀಯ

ಗ್ರಾಪಂ ಫೈಟ್‌: ಬೂತ್‌ ಮಟ್ಟದಲ್ಲಿ ಜೆಡಿಎಸ್‌ “ಕಾರ್ಯಕರ್ತರ ಪಡೆ” ರಚನೆ !

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಜೆಡಿಎಸ್‌ ತಳಮಟ್ಟದಲ್ಲಿ ಸಂಘಟನೆಗೆ ಮುಂದಾಗಿದ್ದು, ಗ್ರಾಪಂನಲ್ಲಿ ಈ ಹಿಂದಿನದಕ್ಕಿತ್ತಲೂ ಹೆಚ್ಚಿನ ಸೀಟುಗಳನ್ನು ಪಡೆಯಲು ಸೂಕ್ಷ್ಮವಾಗಿ ಕೆಲಸ ಆರಂಭಿಸಿದೆ.

2015 ರ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದರು. ಈ ವೇಳೆ ಬಿಜೆಪಿ ಮೂರನೇ ಸ್ಥಾನ ಪಡೆದುಕೊಂಡಿತ್ತು. ಇನ್ನು ಎರಡನೇ ಸ್ಥಾನ ಪಡೆದುಕೊಂಡಿದ್ದ ಜೆಡಿಎಸ್‌ ಈ ಬಾರಿ ಮೊದಲ ಸ್ಥಾನಕ್ಕೇರು ಪ್ರಯತ್ನದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಹಾದಿಯಲ್ಲಿ ಮುನ್ನುಗ್ಗುತ್ತಿದೆ.

ಮೈತ್ರಿ ಸರ್ಕಾರದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಡಿರುವ ಜನಸ್ನೇಹಿ ಕೆಲಸಗಳೇ ಈ ಬಾರಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ಪಕ್ಷಕ್ಕೆ ಆನೆ ಬಲ ತಂದುಕೊಡಲಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಗೊಳಿಸಲು ಜೆಡಿಎಸ್‌ ನಿರ್ಧರಿಸಿದೆ.

ಗ್ರಾಪಂ ಮಾತ್ರವಲ್ಲದೆ, ರಾಜ್ಯದಲ್ಲಿ ನಡೆಯುವ ಎಲ್ಲ ಚುನಾವಣೆಗಳಲ್ಲೂ ಬೂತ್‌ ಮಟ್ಟದಲ್ಲಿ ಸಕ್ರಿಯ ಕಾರ್ಯ ನಿರ್ವಹಿಸುವ ಸಲುವಾಗಿ “ಕಾರ್ಯಕರ್ತರ ಪಡೆ” ರಚನೆಕಾರ್ಯವನ್ನು ಸದ್ದಿಲ್ಲದೆ ಆರಂಭಿಸಿದೆ.

ಇನ್ನು ರಾಜ್ಯದಲ್ಲಿರುವ 6083 ಗ್ರಾಮ ಪಂಚಾಯತಿಗಳಲ್ಲಿ ಈ ಬಾರಿ ಶೇ,45 ರಷ್ಟು ಸೀಟು ಗೆಲ್ಲುವುದಕ್ಕೆ ಜೆಡಿಎಸ್‌ ಸಜ್ಜಾಗುತ್ತಿರುವುದಾಗಿ ರಾಜ್ಯಾಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಹೇಳಿದ್ದಾರೆ.

ನಾವು ಶೇ.70 ರಷ್ಟು ಸೀಟು ಗೆಲ್ಲುವ ಗುರಿ ಹೊಂದಿದ್ದೇವೆ, ಪಕ್ಷದ ವರಿಷ್ಠರಾದ ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ. ಕುಮಾರಸ್ವಾಮಿ ಅವರ ಚಿಂತನೆಯಂತೆ ರಾಜ್ಯದಲ್ಲಿ “ಕಾರ್ಯಕರ್ತರ ಪಡೆ” ರಚನೆಗೆ ರೂಪುರೇಷೆ ರಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?