CrimeNEWSದೇಶ-ವಿದೇಶ

ಪತ್ರಕರ್ತ ಅರ್ನಬ್‌ಗೆ ಮಧ್ಯಂತರ ಜಾಮೀನು ಮಂಜೂರು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ : ಎರಡು ವರ್ಷದ ಹಿಂದೆ ಇಂಟೀರಿಯರ್‌ ಡಿಸೈನರ್‌ ಹಾಗೂ ಅವರ ತಾಯಿ ಆತ್ಮಹತ್ಯೆಗೆ ಶರಣಾಗಿದ್ದ  ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡುವಂತೆ ಅರ್ನಬ್‌ ಗೋಸ್ವಾಮಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್‌, ʻಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆʼ ತಿಳಿಸಿತ್ತು. ನಂತರ ಅರ್ನಬ್‌ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ, ಅರ್ನಬ್‌ ಗೋಸ್ವಾಮಿ ಸೇರಿ ಇಬ್ಬರು ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಲ್ಲದೇ, ಅವರಿಗೆ 50 ಸಾವಿರ  ರೂ. ಮೊತ್ತದ ಬಾಂಡ್‌ ಇರಿಸುವಂತೆ ತಿಳಿಸಿದ್ದು, ಆದೇಶವನ್ನು ತಕ್ಷಣದಿಂದಲೇ ಪಾಲಿಸುವಂತೆ ಪೊಲೀಸ್‌ ಕಮಿಷನರ್‌ಗೆ ನ್ಯಾಯಪೀಠ ಸೂಚಿಸಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ