NEWSಕೃಷಿನಮ್ಮರಾಜ್ಯರಾಜಕೀಯ

ತಾವೇ ಬೆಳೆದ ಬೆಳೆಗಳಿಗೆ ಬೆಲೆ ನಿಗದಿ ಮಾಡುವ ಹಕ್ಕು ರೈತರಿಗಿಲ್ಲ : ಸಿದ್ದರಾಮಯ್ಯ ಬೇಸರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೃಷಿಯನ್ನು ಹೊರತುಪಡಿಸಿ ಇತರೆ ಎಲ್ಲಾ ಉತ್ಪಾದನಾ ವಲಯಗಳಲ್ಲೂ ಬೆಲೆ ನಿಗದಿ ಮಾಡುವ ಹಕ್ಕು ಉತ್ಪಾದಕರಿಗೇ ಇದೆ. ಆದರೆ ರೈತರ ಬೆಳೆಗಳಿಗೆ ಬೆಲೆ ನಿಗದಿ ಮಾಡುವವರು ಕೊಳ್ಳುವವರಾಗಿದ್ದಾರೆ. ಇದರಿಂದ ರೈತಾಪಿ ವರ್ಗ ನಿರಂತರ ಅರ್ಥಿಕ ಶೋಷಣೆ ಎದುರಿಸುವಂತಾಗಿದೆ. ಭವಿಷ್ಯದಲ್ಲಿ ಈ ವ್ಯವಸ್ಥೆಯೂ ಬದಲಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಬರೆದಿರುವ “ರೈತರ ಭದ್ರತೆ, ದೇಶದ ಭದ್ರತೆ” ಎಂಬ ಪುಸ್ತಕವನ್ನು ಬೆಂಗಳೂರಿನ ಗಾಂಧಿ ಭವನದಲ್ಲಿ ಭಾನುವಾರ ಬಿಡುಗಡೆಗೊಳಿಸಿ ಮಾತನಾಡಿದರು. .

ನಾಡಿನ ರೈತರು ಬರಗಾಲ, ಪ್ರವಾಹ, ಕೊರೊನಾ ಹಾವಳಿಗಳಿಂದಾಗಿ ಈಗಾಗಲೇ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ, ಇಂತಹ ಸಂಕಷ್ಟದ ಸಮಯದಲ್ಲಿ ಅವರ ಜೊತೆಗೆ ನಿಲ್ಲಬೇಕಿದ್ದ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆಗಳಿಗೆ ತಿದ್ದುಪಡಿ ತಂದು ರೈತರ ಬೆನ್ನುಮೂಳೆಯನ್ನೇ ಮುರಿಯಲು ಹೊರಟಿದೆ ಎಂದು ದೂರಿದರು.

ದಶಕಗಳ ಹಿಂದಿದ್ದ ಅವಿಭಜಿತ ಕುಟುಂಬಗಳೆಲ್ಲಾ ಕಾಲಕ್ರಮೇಣ ವಿಭಜನೆಯಾಗುತ್ತಾ, ಇಂದು ಸಮಾಜದಲ್ಲಿ ಕೂಡು ಕುಟುಂಬಗಳು ಕಣ್ಮರೆಯಾಗುತ್ತಿವೆ. ಇದರಿಂದ ಬೃಹತ್ ಹಿಡುವಳಿಗಳು ಕುಟುಂಬಗಳ ನಡುವೆ ಹರಿದು ಹಂಚಿಹೋಗಿ ಕೃಷಿ ಕ್ಷೇತ್ರ ಬಡವಾಗುವ ಜೊತೆಗೆ ರೈತರೂ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಹೇಳಿದರು.

12ನೇ ಶತಮಾನದಲ್ಲಿಯೇ ಬಸವಾದಿ ಶರಣರು ಕಾಯಕ, ದಾಸೋಹ ತತ್ವವನ್ನು ಪ್ರತಿಪಾದನೆ ಮಾಡಿದ್ದರು. ಎಲ್ಲರೂ ದುಡಿಯಬೇಕು, ಎಲ್ಲರೂ ಉಣ್ಣಬೇಕು ಎಂಬುದು ಇದರ ಆಶಯ. ಅವರ ಈ ತತ್ವಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಿದ್ದರೆ ಇಂದು ಸಾಮಾಜಿಕ ಅಂತರ ಕಣ್ಮರೆಯಾಗಿ, ಸಮಸಮಾಜ ಸ್ಥಾಪನೆಯಾಗಿರುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಇನ್ನು ರಾಜ್ಯ ಸರ್ಕಾರದ ಜನ ವಿರೋಧಿ, ರೈತ ವಿರೋಧಿ ಕಾಯ್ದೆಗಳ ವಿರುದ್ಧ ಸದನದಲ್ಲಿ ಸುದೀರ್ಘ ಚರ್ಚೆ ನಡೆಸಿ, ಅವುಗಳ ಸಾಧಕ- ಬಾಧಕಗಳನ್ನು ರಾಜ್ಯದ ಜನರ ಮುಂದೆ ಇಡಬೇಕು ಎಂಬುದು ನಮ್ಮ ಆಶಯ. ಆದರೆ ಈ ಬಾರಿಯ ಅಧಿವೇಶನದಲ್ಲಿ ಪ್ರಮುಖ ವಿಚಾರಗಳ ಚರ್ಚೆಗೆ ಅಗತ್ಯ ಸಮಯ ಸಿಗುವುದೇ ಅನುಮಾನವೆಂಬಂತಿದೆ ಎಂದರು.

Leave a Reply

error: Content is protected !!
LATEST
ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ