NEWSನಮ್ಮರಾಜ್ಯ

ಕಲಬುರಗಿ: ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಕೊಡಿ, ಒಂದು ಕೆಜಿ ಸಕ್ಕರೆ ಪಡೆಯಿರಿ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮ ಪರಿಕಲ್ಪನೆಯಡಿ ಗ್ರಾಮಸ್ಥರು ಒಂದು ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ನೀಡಿ ಅದಕ್ಕೆ ಸರಿಸಮನಾಗಿ ಒಂದು ಕೆಜಿ ಸಕ್ಕರೆ ಪಡೆಯಿರಿ ಎಂಬ ಗ್ರಾಮ ಪಂಚಾಯಿತಿಯ ವಿನೂತನ ಯೋಜನೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಚಾಲನೆ ನೀಡಿದರು.

ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದಲ್ಲಿ 18.45 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಗ್ರಾಮ ಪಂಚಾಯಿತಿಯ ನೂತನ‌ ಕಟ್ಟಡ ಉದ್ಘಾಟನೆ ವೇಳೆ ಯೋಜನೆಗೆ ಚಾಲನೆ ನೀಡಿದ ಅವರು ಇದು ರಾಜ್ಯದಲ್ಲೇ ಪ್ರಥಮ ಪ್ರಯೋಗವಾಗಿದೆ. ನಿಮ್ಮಮನೆಯಲ್ಲಿ ಸಿಗುವ ಒಂದು ತುಂದ ಪ್ಲಾಸ್ಟಿಕ್‌ ಅನ್ನು ವೇಸ್ಟ್‌ ಮಾಡದೆ ಗ್ರಾಮ ಪಂಚಾಯಿತಿ ತಂದು ಕೊಟ್ಟರೆ ಅಷ್ಟೇ ಪ್ರಮಾಣದ ಸಕ್ಕರೆಯನ್ನು ನಿಮಗೆ ಕೊಡಲಾಗುವುದು ಎಂದು ತಿಳಿಸಿದರು.

ಇದೇವೇಳೆ ಕೊರೊನಾ ಮಹಾಮಾರಿ ನಿಯಂತ್ರಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಗಳಾದ ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ  ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಿಬ್ಬಂದಿ, ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಜಿಪಂ ಉಪಾಧ್ಯಕ್ಷೆ ಶೋಭಾ ಸಿರಸಗಿ, ಸದಸ್ಯ ಸಂತೋಷ್ ಪಾಟೀಲ್ ಧನ್ನೂರ, ಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಗದೇವಿ ಪೀರಯ್ಯ ಗುತ್ತೇದಾರ, ಉಪಾಧ್ಯಕ್ಷ ಅರುಣಕುನಾರ ಓಗೆ, ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ವಿ. ಚಳಕೇರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಕಂಟೆಪ್ಪ, ಪಿಡಿಒ ಅನುಪಮಾ ಎಂ. ಇನ್ನಿತರರು ಉಪಸ್ಥಿತರಿದ್ದರು.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ