NEWSನಮ್ಮಜಿಲ್ಲೆರಾಜಕೀಯ

ಕಾವೇರಿ ನದಿಯಲ್ಲಿ ಈಜಾಡಿ ಸಂಭ್ರಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಕನಕಪುರ: ನಿನ್ನೆ ಚೂಡಾಮಣಿ ಸೂರ್ಯ ಗ್ರಹಣ ಮುಗಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮೂರಿನ ಸಮೀಪದಲ್ಲಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಈಜಾಡಿ ಸಂಭ್ರಮಿಸಿದ್ದಾರೆ.

ಈ ಬಗ್ಗೆ ಅವರು ಫೇಸ್‌ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿದ್ದು, ಸಂಭ್ರಮಿಸಿದ ಆ ಕ್ಷಣವನ್ನು ಅಭಿಮಾನಿಗಳು ಮತ್ತು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾರೆ.

40 ವರ್ಷಗಳ ನಂತರ ಭಾನುವಾರ ಸಂಜೆ 4:30ಕ್ಕೆ ನಮ್ಮ ಹಳ್ಳಿಯ ಬಳಿ ಕಾವೇರಿ ನದಿಯಲ್ಲಿ ಈಜಾಡಿ ನಾನು ಕೆಲ‌ ಸಮಯ ಕಳೆದದ್ದು ನಿಜಕ್ಕೂ ಸಂತಸ ನೀಡಿದೆ. ನನ್ನ ಶಾಲಾ ಹಾಗೂ ಕಾಲೇಜು ದಿನಗಳಲ್ಲಿ ನಾನು ಮತ್ತು ನನ್ನ ತಂದೆಯೊಂದಿಗೆ ಇದೇ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದ ಮತ್ತು ನದಿಯಲ್ಲಿ ಈಜಾಡುತ್ತಿದ್ದ ಕ್ಷಣಗಳು ಮತ್ತೊಮ್ಮೆ ಕಣ್ಣ ಮುಂದೆ ಹಾದುಹೋದವು ಎಂದು ಅಂದಿನ ನೆನಪನ್ನು ಹಂಚಿಕೊಂಡಿದ್ದಾರೆ.

ಅಷ್ಟೇ ಅಲ್ಲದೇ ‪ಸೂರ್ಯ ಗ್ರಹಣ ಮುಗಿದ ನಂತರ, ನನ್ನ ಕುಟುಂಬದೊಂದಿಗೆ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದೆ ಎಂದು ಕೂಡ ಸಂತಸದಿಂದ ಹೇಳಿಕೊಂಡಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್