Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯ

ಕರ್ನಾಟಕ ಬಂದ್‌ ಬೆಳಗ್ಗೆ 10ಗಂಟೆ ನಂತರ ತೀವ್ರಗೊಳ್ಳುವ ಸಾಧ್ಯತೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಬೆಳ್ಳಂಬೆಳಗ್ಗೆ ಬಂದ್‌ ಆರಂಭಿಸಿದ್ದು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇನ್ನು ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳ ಬಾಗಿಲುಗಳನ್ನು ಮುಚ್ಚಲಾಗಿದೆ. ಅಲ್ಲದೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ನೀಡಲು ಅಂಗಡಿ ಮಾಲೀಕರು ನಿರ್ಧಿಸಿದ್ದು, 10ಗಂಟೆ ನಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ.

ಈ ನಡುಗೆ ಬಿಎಂಟಿಸ್‌ಗಳು ಕಾರ್ಯಚರಣೆ ಆರಂಭಿಸಿವೆ. ಆದರೆ ಪ್ರಯಾಣಿಕರು ಇಲ್ಲದೆ ಖಾಲಿ ಬಸ್‌ಗಳನ್ನೇ ಓಡಿಸಲಾಗುತ್ತಿದೆ. ಈ ನಡುವೆ ರಸ್ತೆ ಮೇಲೆ ಟೈರ್‌ಗಳನ್ನು ಸುಟ್ಟಿ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇನ್ನು ಓಲಾ ಊಬರ್‌ ಈ ಹಿಂದೆ ಬೆಂಬಲ ನೀಡಿದ್ದು ಈಗ ವಾಪಸ್‌ ಪಡೆದಿದೆ ಎಂದು ಹೇಳಲಾಗಿತ್ತು ಆದರೆ ಓಲಾ ಊಬರ್‌ ಸಂಘದ ಅಧ್ಯಕ್ಷ ತನ್ವರ್‌ ಪಾಷಾ ಸ್ಪಷ್ಟನೆ ನೀಡಿದ್ದು, ನಾವು ಬಂದ್‌ಗೆ ಬೆಂಬಲ ನೀಡಿದ್ದು ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಕನ್ನಡ ಭಾಷೆ ಭಾಷೆಯನ್ನಯ ಜಾಗತಿಕ ಮಟ್ಟಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸುವುದನ್ನು ಬಿಟ್ಟು ಅನ್ಯ ಭಾಷಿಕರ ಅಭಿವೃದ್ಧಿ ನಿಗಮ ರಚಿಸುವ ಮೂಲಕ ಕನ್ನಡಕ್ಕೆ ಕೊಡಲಿ ಪೆಟ್ಟು ನೀಡುವಂತ ನೀಚ ಕೃತ್ಯಕ್ಕೆ ಸರ್ಕಾರ ಇಳಿದಿರುವುದು ನಾಡಿಗೆ ಮತ್ತು ನಾಡಿನ ಜನತೆಗ ಮಾಡಿದ ಅವಮಾನ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಕಿಡಿಕಾರುತ್ತಿದ್ದಾರೆ.

ಇನ್ನೂ ಕಾಲ ಮಿಂಚಿಲ್ಲ ನೀವು ಮಾಡಿರುವ ತಪ್ಪನ್ನು ತಿದ್ದಿಕೊಂಡು ಕನ್ನಡ ನಾಡು ನುಡಿಗೆ ಮೊದಲ ಆದ್ಯತೆ ನೀಡುವ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ