ಬೆಂಗಳೂರು: ಮಹಾಮಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಜನರು ಭಾರಿ ಸಂಕಷ್ಟಕ್ಕೆ ಸಲುಕಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಗೆ 5 ಜನ ಪ್ರಾಣ ಕಳೆದುಕೊಂಡಿದ್ದು, ಅಲ್ಲದೆ ಹಲವಾರು ಮಂದಿ ತಮ್ಮ ಬದುಕನ್ನು ಕಳೆದುಕೊಂಡಿದ್ದಾರೆ. ಈನಡುವೆ ರಾಜ್ಯದ ಇನ್ನು ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನ ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಮಹಾರಾಷ್ಟ್ರ ಹಾಗೂ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಹೆಚ್ಚಾಗುತ್ತಿದೆ. ನಾರಾಯಣಪುರದ ಬಸವಸಾಗರ ಜಲಾಶಯದಿಂದ ನದಿಗೆ 2.60 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಜಲಾಶಯಕ್ಕೆ 2.20 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಜಿಲ್ಲೆಯ ಎರಡು ಸೇತುವೆಗಳು ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ. ಲಿಂಗಸಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದ್ದು, ಕಡದರಗಡ್ಡಿ, ಎಳಗುಂದಿ ಸೇರಿ ಎಂಟು ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ. ದೇವದುರ್ಗ ತಾಲೂಕಿನ ಹೂವಿನ ಹೆಡಗಿ ಸೇತುವೆಯೂ ಮುಳುಗಡೆಯಾಗಿದ್ದು, ದೇವದುರ್ಗ ಕಲಬುರ್ಗಿ ರಾಜ್ಯ ಹೆದ್ದಾರಿ ಮಾರ್ಗ ಕಡಿತವಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನೂ ದೇವದುರ್ಗ ತಾಲೂಕಿನ ಕೊಪ್ಪರದ ಐತಿಹಾಸಿಕ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಜಲಾವೃತವಾಗಿದೆ. ದೇವಾಲಯದ ಗರ್ಭಗುಡಿಯ ಮೆಟ್ಟಿಲುವರೆಗೆ ನೀರು ಬಂದಿದೆ. ಹೀಗಾಗಿ ಭಕ್ತರಿಗೆ ದೇವರ ದರ್ಶನ ಕಷ್ಟಸಾಧ್ಯವಾಗಿದೆ.
ಒಟ್ಟು 33.333 ಟಿಎಂಸಿ ಸಾಮರ್ಥ್ಯ ದ ಬಸವಸಾಗರ ಜಲಾಶಯದಲ್ಲಿ ಈಗ 26.23 ಟಿಎಂಸಿ ನೀರು ಸಂಗ್ರಹವಿದೆ. ಒಳಹರಿವು ಹೆಚ್ಚಾದಂತೆ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನ ಹರಿಸಲಾಗುತ್ತಿದೆ. ಜೊತೆಗೆ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಜನ ಆತಂಕದಲ್ಲಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬೆಳಗಾವಿ, ಚಿಕ್ಕೋಡಿಯಲ್ಲೂ ಪ್ರವಾಹ ಭೀತಿ ಹೆಚ್ಚಾಗಿದ್ದು, ಗ್ರಾಮಗಳು ಜಲಾವೃತವಾಗಿರುವುದರಿಂದ ಅಲ್ಲಿನ ನಿವಾಸಿಗಳು ಗ್ರಾಮಗಳನ್ನು ತೊರೆಯುತ್ತಿದ್ದಾರೆ.
ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದ್ದು, ಕೋಟಾಬಾಗಿ ಗ್ರಾಮ, ಲಕ್ಷ್ಮೀ ದೇವಾಲಯ ಜಲಾವೃತವಾಗಿದೆ. ಇನ್ನು ಸತತವಾಘಿ ಒಂದೇ ಸಮನೆ ಸುರಿಯುತ್ತಿರುವ ಮಳೆಗೆ ಮನೆಗಳು ಕುಸಿದು ಬೀಳುತ್ತಿವೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬಾಗಲಕೋಟೆಯ ಜಾಂಬಗಿರಿರೆಡ್ಡಿ ಗ್ರಾಮದ ದೇವಾಲಯ ನೀರಿನಿಂದ ಮುಳುಗಡೆಯಾಗಿದ್ದು, ಗರ್ಭಗುಡಿಯಲ್ಲಿದ್ದ ದೇವರ ವಿಗ್ರಹವನ್ನು ಗ್ರಾಮಸ್ಥರು ಸ್ಥಳಾಂತರಿಸಿದ್ದಾರೆ. ಧಾರವಾಡದ ಇಂದಿರಮ್ಮ ಕೆರೆ ತುಂಬಿ ಕೂಡಿ ಬಿದ್ದಿರುವುದರಿಂದ ಹಲವು ಭಾಗಗಳು ಮುಳುಗಡೆಯಾಗಿವೆ.
ಪ್ರವಾಹದಿಂದ ಹಲವಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದು, ಮತ್ತೊಂದೆಡೆ ಜಮೀನಿನಲ್ಲಿ ಹಾಕಿದ್ದ ಫಲಸು ಕೊಚ್ಚಹೋಗಿದೆ. ಇದರಿಂದ ಉತ್ತರ ಕರ್ನಾಟಕದ ಮಂದಿಗೆ ಜೀವನ ದುಸ್ತರವಾಗಿ ಕಾಡುತ್ತಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail