Please assign a menu to the primary menu location under menu

NEWSನಮ್ಮಜಿಲ್ಲೆರಾಜಕೀಯ

ಕೌಟಿಲ್ಯ ರಘು ಗೆಲ್ಲುವ ವಿಶ್ವಾಸವಿದೆ: ಸಿ.ಎಚ್.ವಿಜಯಶಂಕರ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಕಳೆದ ಬಾರಿ ಅತ್ಯಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದ ಸೌಮ್ಯ ಸ್ವಭಾವದ ರಘು ಕೌಟಿಲ್ಯ ಅವರು ಈ ಬಾರಿ ಭಾರಿ ಅಂತರದ ಮತಗಳಿಂದ ವಿಜಯಶಾಲಿಯಾಗಿ ಹೊರ ಬರಲಿದ್ದಾರೆ ಎಂದು ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಮೈಸೂರು ಮತ್ತು ಚಾಮರಾಜನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಕೆರಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷವು ಅತ್ಯಂತ ಉತ್ಸಹಶಾಲಿ ಕಾರ್ಯಕರ್ತರನ್ನು ಹೊಂದಿದ್ದು, ಹಿಂದೆಯೂ ಈ ಕ್ಷೇತ್ರದಿಂದ ಪ್ರೊ.ಮಲ್ಲಿಕಾರ್ಜುನಪ್ಪನವರು ಆಯ್ಕೆಯಾಗಿದ್ದರು, ಕಳೆದ ಬಾರಿ ಇದೇ ಕೌಟಿಲ್ಯ ರಘುರವರು ನಮ್ಮ ಸರ್ಕಾರವಿಲ್ಲದಿದ್ದರೂ ಮೆಲ್ಮನೆ ಸದಸ್ಯತ್ವ ಬಯಸಿ ಸ್ಪರ್ಧೆ ಮಾಡಿ ಕೆಲವೇ ಅಂತರದ ಮತಗಳಿಂದ ಪರಾಭವಗೊಂಡಿದ್ದರು.

ಈ ಬಾರಿಯೂ ಅವರನ್ನು ಪಕ್ಷ ಒಮ್ಮತದ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಸಿದ್ದು, ನಮ್ಮ ಸರ್ಕಾರ ನೀಡುತ್ತಿರುವ ಜನಪರ ಆಡಳಿತ ರಘು ಕೌಟಿಲ್ಯರ ಗೆಲುವಿಗೆ ಸಹಕಾರಿಯಾಗಲಿದ್ದು ಈ ಬಾರಿ ಅವರು ಬಾರಿ ಮತಗಳ ಅಂತರದಿಂದ ವಿಜಯಶಾಲಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್.ಸಿ.ಬಸವರಾಜು, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ಎಚ್.ಸಿ.ವೀರಭದ್ರ, ಬೆಮ್ಮತ್ತಿ ಚಂದ್ರು, ಮಾಜಿ ಅಧ್ಯಕ್ಷ ಪಿ.ಜೆ.ರವಿ, ಜಿಲ್ಲಾ ಸಹ ವಕ್ತಾರ ವಸಂತ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಕಿತ್ತೂರು, ಮುಖಂಡರಾದ ಆರ್.ಟಿ.ಸತೀಶ್, ಅಪ್ಪಣ್ಣ, ಶುಭಾಗೌಡ, ಬಾನು, ಶಿವರಾಮೇಗೌಡ, ಲೋಕಪಾಲಯ್ಯ, ರಮೇಶ್, ಚನ್ನಬಸವರಾಜು ಸೇರಿದಂತೆ ಮತ್ತಿತರರು ಇದ್ದರು.

Leave a Reply

error: Content is protected !!
LATEST
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?