NEWSದೇಶ-ವಿದೇಶನಮ್ಮರಾಜ್ಯ

ಲಂಡನ್‌ನಿಂದ ರಾಜ್ಯಕ್ಕೆ ಮೊದಲ ವಿಮಾನ ಆಗಮನ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 326 ಅನಿವಾಸಿ ಭಾರತೀಯರು  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಂಡನ್ ನಲ್ಲಿರುವ ಅನಿವಾಸಿ ಭಾರತೀಯರನ್ನು ಹೊತ್ತು ತಂದ ವಿಮಾನವು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ, ಲಂಡನ್‌ನಿಂದ ರಾಜ್ಯಕ್ಕೆ ಬಂದಿಳಿದ ಮೊದಲ ವಿಮಾನದಲ್ಲಿ ಮೂರು ಮಕ್ಕಳು ಸೇರಿದಂತೆ ಒಟ್ಟು 326 ಪ್ರಯಾಣಿಕರು ಆಗಮಿಸಿದ್ದಾರೆ.

ಕೋವಿಡ್-19 ಲಾಕ್ ಡೌನ್ ಹಿನ್ನೆಲೆ ದೇಶಾದ್ಯಂತ ವಿಮಾನಯಾನ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಅನಿವಾಸಿ ಭಾರತೀಯರ ಆಗಮನಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದು,  ಅದರಂತೆ ಇಂದು 326ಮಂದಿಯನ್ನು ಕರೆತರಲಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ, ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರ ಕೋವಿಡ್-19 ಆರೋಗ್ಯ ತಪಾಸಣೆಗಾಗಿ ವಿಮಾನ ನಿಲ್ದಾಣದಲ್ಲಿ ಅಗತ್ಯ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು.

ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಪ್ರತಿ ಪ್ರಯಾಣಿಕರೂ ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯವಾಗಿದೆ. ಹೀಗಾಗಿ ಹೋಟೆಲ್ ಗಳನ್ನು ಬಳಸಲಾಗುತ್ತಿದ್ದು, ಅಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಕ್ವಾರಂಟೈನ್ ವೆಚ್ಚವನ್ನು ಪ್ರಯಾಣಿಕರೇ ಭರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ