NEWSಆರೋಗ್ಯನಮ್ಮಜಿಲ್ಲೆ

ಕೆರೆ ಕಾಮೇಗೌಡರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಕೊಳ್ಳಿ ಎಂದ ಸಚಿವರ ಸುಧಾಕರ್‌

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕೆರೆ ಕಾಮೇಗೌಡರ ಆರೋಗ್ಯ  ಗಂಭೀರ ಸ್ವರೂಪ ಪಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದ ಬೆನ್ನಲ್ಲೇ  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಾಮೇಗೌಡ ಅವರನ್ನು ಮಂಡ್ಯ ದೊಡ್ಡಾಸ್ಪತ್ರೆಗೆ  ದಾಖಲಿಸಿಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ಕಾಮೇಗೌಡ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒದಗಿಸಬೇಕೆಂದು ಸೂಚನೆ ನೀಡಿದ್ದೇನೆ. ಇಡೀ ದೇಶಕ್ಕೆ ಸ್ಫೂರ್ತಿಯಾಗಿರುವ ಕಾಮೇಗೌಡ ಅವರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

85 ವರ್ಷದ ಕಾಮೇಗೌಡ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ಶೀಘ್ರ  ಗುಣಮುಖರಾಗಲಿ ಎಂದು ಸಮಸ್ತ ನಾಡಿನ ಜನತೆ ಪ್ರಾರ್ಥಿಸುತ್ತಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು