CrimeNEWSನಮ್ಮಜಿಲ್ಲೆ

ಕೊಡಗು: ಗ್ರಾಪಂ ಚುನಾವಣೆ ಸೋಲಿನಿಂದ ಹತಾಶೆ: ಗೆದ್ದವರ ಮೇಲೆ ಹಲ್ಲೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೊಡಗು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಯುವಕರ ಗುಂಪೊಂದು ಕ್ಯಾಂಟೀನ್‌ಗೆ ನುಗ್ಗಿ ದಾಂಧಲೆ ಮಾಡಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಬೈಲುಕುಪ್ಪೆ ಯಲ್ಲಿ ತಡವಾಗಿ ಸುದ್ದಿಯಾಗಿದೆ.

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ವಾರ ಕಳೆದರೂ ವೈಷಮ್ಯ ಮಾತ್ರ ಕಡಿಮೆ ಆದಂತೆ ಕಾಣಿಸುತ್ತಿಲ್ಲ. ಹೌದು! ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದಿದ್ದಾರೆ. ಹೀಗಾಗಿ 12 ಮಂದಿ ಇದ್ದ ಯುವಕರ ಗುಂಪು ಏಕಾಏಕಿ ಕ್ಯಾಂಟೀನ್‌ಗೆ ನುಗ್ಗಿ ದಾಂಧಲೆ ಮಾಡಿದೆ. ಆ ವೇಲೆ ಕ್ಯಾಂಟೀನ್ ಮಾಲೀಕ ಅಸ್ಕರ್ ಅಲಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಜನವರಿ 3ರಂದು ಬೈಲುಕುಪ್ಪೆ ಕ್ಯಾಂಟೀನ್ ಗೆ ಏಕಾಏಕಿ ಬಂದು ಗಲಾಟೆ ಮಾಡಿದ ಕಿಡಿಗೇಡಿಗಳು ಕ್ಯಾಂಟೀನ್ ಮಾಲೀಕ ಅಲಿ ಅವರ ಕಣ್ಣಿಗೆ ಕಾರದ ಪುಡಿ ಎರಚಿ ತಲೆಗೆ ಹೊಡೆದು ಹಲ್ಲೆ ಮಾಡಿದ್ದಾರೆ. ಈ ವೇಳೆ ಕ್ಯಾಂಟೀನ್‌ನಲ್ಲಿ ಟೀ ಕುಡಿಯುತ್ತಿದ್ದ ಗ್ರಾಹಕನ ತಲೆಗೂ ಗಂಭೀರ ಗಾಯಗಳಾಗಿವೆ.

ಇನ್ನು ಅಲಿ ಅವರನ್ನು ಕಿಡಿಗೇಡಿಗಳು ರಸ್ತೆಗೆ ಎಳೆತಂದು ದೊಣ್ಣೆಯಿಂದ ಹೊಡೆದು ಕ್ರೌರ್ಯ ಮೆರೆದಿದ್ದಾರೆ. ಆ ಹೊಡೆದಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...