NEWSಕೃಷಿನಮ್ಮರಾಜ್ಯ

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ 

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ:  ಮುಂಗಾರು ಆರಂಭವಾಗುವುದಕ್ಕೂ ಮೊದಲೇ ಭಾನುವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭವಾಗುವ ಲಕ್ಷಣ ಕಾಣುತ್ತಿದೆ.

ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ ಬೆಳಗ್ಗೆ 8 ಗಂಟೆ ವರೆಗೆ ಮಳೆಯಾಗಿ ತಂಪಾದ ವಾತಾವರಣ ನಿರ್ಮಾಣವಾಗಿದೆ.  ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 40.77 ಮಿ.ಮೀ ಮಳೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 82.4 ಮಿ.ಮೀ. ವಿರಾಜಪೇಟೆ ತಾಲೂಕಿನಲ್ಲಿ 12.75 ಮಿ.ಮೀ. ಸೋಮವಾರಪೇಟೆಯಲ್ಲಿ ಸರಾಸರಿ ಮಳೆ 21.15 ಮಿ.ಮೀ.  ಜಿಲ್ಲೆಯಲ್ಲಿ ಹೋಬಳಿವಾರು ಮಡಿಕೇರಿ ಕಸಬಾ 51.2, ನಾಪೋಕ್ಲು 37.2, ಸಂಪಾಜೆ 111.2, ಭಾಗಮಂಡಲ 130, ವಿರಾಜಪೇಟೆ ಕಸಬಾ 10.8, ಹುದಿಕೇರಿ 2, ಪೊನ್ನಂಪೇಟೆ 7.2, ಅಮ್ಮತ್ತಿ 7, ಬಾಳೆಲೆ 24, ಸೋಮವಾರಪೇಟೆ ಕಸಬಾ 314, ಶನಿವಾರಸಂತೆ 19.4, ಶಾಂತಳ್ಳಿ 66.2, ಕೊಡ್ಲಿಪೇಟೆ 20.4, ಕುಶಾಲನಗರ 15.8, ಸುಂಟಿಕೊಪ್ಪ 10.1 ಮಿ.ಮೀ. ಮಳೆಯಾಗಿದೆ.

ಜಿಲ್ಲೆಯಲ್ಲಿ ಇನ್ನೆರೆಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು,  ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್  ಸುದ್ದಿಗೋಷ್ಠಿ ಯಲ್ಲಿ ಮಾಹಿತಿ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ