ಕೋಲಾರ: ಜಿಲ್ಲೆಯ ಸೋಮಾಂಬುದಿ ಅಗ್ರಹಾರ ಕೆರೆ ಒತ್ತುವರಿಯಾಗಿದೆ ಅದನ್ನು ತೆರವು ಗೊಳಿಸಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ ರೈತ ಸಂಘದ ಜಿಲ್ಲಾಧ್ಯಕ್ಷೆ ನಳಿನಿ ಗೌಡ ಅವರನ್ನು ನಿಂದಿಸಿರುವ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರೈತಸಂಘದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಇಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿ ವಿವಿಧೆಡೆ ಪ್ರತಿಭಟನೆ ಮಾಡಿದ ರೈತ ಸಂಘದ ಕಾರ್ಯಕರ್ತರು, ಚಿಕ್ಕಬಳ್ಳಾಪುರ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಚಿವ ಮಾಧುಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೆ.ಸಿ.ವ್ಯಾಲಿ ನೀರು ಮುಂದಕ್ಕೆ ಹರಿಯದಂತೆ ದುರ್ಬಳಕೆ ಆಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಕೆರೆ ವೀಕ್ಷಣೆ ಮಾಡಲು ಜಿಲ್ಲೆಗೆ ಭೇಟಿ ನೀಡಿದ್ಧ ವೇಳೆ ಕಾನೂನು ಸಂಸದೀಯ ವ್ಯವಹಾರಗಳ ಮತ್ತು ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ನಮ್ಮ ಸಂಘದ ಜಿಲ್ಲಾಧ್ಯಕ್ಷೆ ನಳಿನಿ ಗೌಡ ಅವರೊಂದಿಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಹೀಗಾಗ ಅವರು ಸಚಿವ ಸ್ಥಾನದಲ್ಲಿ ಮುಂದುವರಿಯಲು ಅರ್ಹರಲ್ಲ ಆದ್ದರಿಂದ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೆರೆ ಒತ್ತುವರಿಯಾಗಿರುವುದನ್ನು ತೆರವುಗೊಳಿಸಿಕೊಡಿ ಇದರಿಂದ ಕೊನೆ ಭಾಗದ ರೈತರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಕ್ಕೆ, ದೂರು ತೆಗೆದುಕೊಂಡು ಬಂದಿದ್ದೀಯ ನೀನೇನು ಮಾಡುತ್ತೀಯ ಎಂದು ಏಕ ವಚನದಲ್ಲೇ ಮಾತನಾಡಿದ್ದು ಅಲ್ಲದೇ ನಾನು ಕೆಟ್ಟ ಮನುಷ್ಯ ಇನ್ನು ನೋಡಿಲ್ಲ ಎಂದು ಅವಾಚ್ಯ ಶಬ್ದ ಬಳಸಿ ನಿಂದಿಸಿರುವ ಕಾನೂನು ಸಚಿವರ ನಡೆ ನಿಜಕ್ಕೂ ರೈತರಿಗೆ ಮಾಡಿರುವ ಅವಮಾನ. ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ. ಇಂಥವರು ಸಚಿವ ಸ್ಥಾನದಲ್ಲಿ ಮುಂದುವರಿಯುವುದಕ್ಕೆ ಯೋಗ್ಯತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ನಮ್ಮದು ರೈತರ ಪರ ಸರ್ಕಾರ ಎಂದು ಹೇಳಿಕೊಳ್ಳುವ ಇವರೇ ರೈತರ ಬಗ್ಗೆ ಇಂಥ ಕೆಟ್ಟಪದ ಬಳಕೆ ಮಾಡಿದರೆ ಹೇಗೆ, ಇವರಿಂದ ರೈತರು ಉದ್ಧಾರ ಆಗಬೇಕ? ರೈತ ಬೆಳೆ ಬೆಳೆಯದಿದ್ದರೆ ಇವರು ಸರ್ಕಾರವನ್ನು ಹೇಗೆ ನಡೆಸುತ್ತಾರೆ. ಇಂಥ ಮಂತ್ರಿ ನಮಗೆ ಬೇಡ ರಾಜೀನಾಮೆ ನೀಡಿ ಹೋಗಲಿ ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರೈತಸಂಘದ ನೂರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail