Please assign a menu to the primary menu location under menu

NEWSನಮ್ಮಜಿಲ್ಲೆ

ಅಭಿವೃದ್ಧಿ ಕೆಲಸಗಳಿಗೆ ಒತ್ತು: ಸಚಿವ ನಾಗೇಶ್

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಸರ್ಕಾರದಿಂದ ಬರುತ್ತಿರುವ ಸಂಪೂರ್ಣವಾಗಿ ಅನುದಾನದ ಸಮರ್ಪಕ ಬಳಕೆ ಮಾಡಲಾಗುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್ ನಾಗೇಶ್ ಅವರು ತಿಳಿಸಿದರು.

ಸೋಮವಾರ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

2 ವರ್ಷದ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಮಾಡಲು ಶ್ರಮಿಸಿದ್ದು, ಸಾಕಷ್ಟು ಪ್ರಗತಿಯಾಗಿದೆ ಇನ್ನೂಳಿದ 3 ವರ್ಷಗಳ ಕಾಲ  ಸರ್ಕಾರದ ವಿವಿಧ ಯೋಜನೆಗಳಲ್ಲಿ ಜನರಿಗೆ ಸಿಗಬೇಕಾದ ಸೌಲಭ್ಯಗಳನ್ನು ಸಂಪೂರ್ಣವಾಗಿ ತಲುಪಿಸುತ್ತೇನೆ ಎಂದರು.

ಮಾಲೂರು ಶಾಸಕ ಕೆ.ವೈ. ನಂಜೇಗೌಡ ಮಾತನಾಡಿ, ಪಕ್ಷಾತೀತವಾಗಿ ಕೆಲಸ ಮಾಡಬೇಕು ಆಗ ಆಡಳಿತ ಕೊಟ್ಟ ಎಲ್ಲರಿಗೂ ಗೌರವ ಸಿಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ  ನೂತನ ಗ್ರಾಮ ಪಂಚಾಯಿತಿ ಕಟ್ಟಡ, ಅಂಗನವಾಡಿ ಕೇಂದ್ರ, ಬಸ್ ತಂಗುದಾಣವನ್ನು ಉದ್ಘಾಟನೆ ಮಾಡಿದರು. ಲಕ್ಕೂರು ಹೋಬಳಿಯ ವ್ಯಾಪ್ತಿಯ ಬಾಣಂತಿಯರಿಗೆ ಭಾಗ್ಯಲಕ್ಷೀ ಬಾಂಡ್ ವಿತರಣೆ ಮಾಡಿದರು.

ಕೋಲಾರ  ಸಂಸದ ಎಸ್. ಮುನಿಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಭಾಗ್ಯವತಿ ಅಗ್ರಿ ನಾರಾಯಣಪ್ಪ, ತಹಸೀಲ್ದಾರ್‌ ಮಂಜುನಾಥ್ ಇತರರಿದ್ದರು.

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ