ಕೃಷಿನಮ್ಮರಾಜ್ಯರಾಜಕೀಯ

ಜುಲೈ 28ರಿಂದ ನಾಲೆಗಳಿಗೆ ಹರಿಯಲಿದೆ ಕಾವೇರಿ, ಕಬಿನಿ ನೀರು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕಬಿನಿ ಹಾಗೂ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ಜುಲೈ 28ರಿಂದ ಕಟ್ಟುಪದ್ಧತಿಯಲ್ಲಿ ನೀರು ಹರಿಸಬೇಕು. ಹಾರಂಗಿ ಜಲಾಶಯಗಳಿಂದಲೂ ಅದೇ ದಿನ ಇಲ್ಲವೇ ಆದಷ್ಟು ಶೀಘ್ರವಾಗಿ ನೀರು ಬಿಡಲು ಹಾರಂಗಿ ಐ.ಸಿ.ಸಿ. ಸಭೆ ಮಾಡಿ ಕ್ರಮ ಕೈಗೊಳ್ಳಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೆಆರ್‌ಎಸ್‌  ಬೃಂದಾವನ ಗಾರ್ಡನ್ ಕಾವೇರಿ ಸಭಾಂಗಣದಲ್ಲಿ ನಡೆದ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲಾ ಶಾಸಕರು ನೀರಾವರಿ ಸಲಹಾ ಸಮಿತಿಗಳ ಸದಸ್ಯರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜುಲೈ 28 ರಿಂದ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಬಿಡಲು ಸಮಿತಿಯ ಎಲ್ಲಾ ಶಾಸಕರು ಒಪ್ಪಿಗೆ ಸೂಚಿದ್ದಾರೆ. ಕೆಲವು ನಾಲೆಗಳ ದುರಸ್ತಿ ಇದ್ದು, ಇದನ್ನು ಶೀಘ್ರ ಮುಗಿಸಿ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸವಡೆಗಳಿಗೆ ಶೀಘ್ರದಲ್ಲೇ ವೇತನ ಬಿಡುಗಡೆ
ಸವಡೆಗಳಿಗೆ 6 ತಿಂಗಳಿನಿಂದ ವೇತನ ನೀಡದಿರುವ ಬಗ್ಗೆ ಸಭೆಯಲ್ಲಿ ಶಾಸಕರು ಗಮನಕ್ಕೆ ತಂದಿದ್ದಾರೆ. ಇವರಿಗೆ ಶೀಘ್ರದಲ್ಲೇ ವೇತನ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, 1492 ಸವಡೆಗಳ ನೇಮಕ, ವೇತನ ಸೇರಿದಂತೆ ಸೇರಬೇಕಾದ ಇತರ ಸೌಲಭ್ಯಗಳ ಬಗ್ಗೆ ಶೀಘ್ರ ಕ್ರಮವಹಿಸಲಾಗುವುದು. ಅವರ ಕೆಲಸ ಬಹಳ ಮುಖ್ಯವಾಗಿದೆ,ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ತಿಳಿಸಿದರು.

ಕಳೆದ 10 ದಿನಗಳ ಹಿಂದೆ ಕೃಷಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದಾಗ ನೀರಿನ ಅವಶ್ಯಕತೆ ಬಗ್ಗೆ ಚರ್ಚೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ನಾರಾಯಣಗೌಡ ಅವರಲ್ಲಿ ಚರ್ಚಿಸಿ ಸಭೆಯನ್ನು ನಿಗದಿ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುನ್ನಾ ನಡೆದ ಸಭೆಯಲ್ಲಿ ಕಬಿನಿಯಲ್ಲಿ 15 ಟಿಎಂಸಿ ನೀರನ್ನು ಬಳಕೆ ಮಾಡಬಹುದಾಗಿದ್ದು, ಕೆರೆಗಳಿಗೆ ತುಂಬಿಸಲು 2 ರಿಂದ 2.5 ನೀರನ್ನು ಕೊಡಬಹುದಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸವಡೆಗಳಿಗೆ ಈ ಹಿಂದೆ ಇರುವ ಬಾಕಿ ವೇತನವನ್ನು 2-3 ವಾರಗಳಲ್ಲಿ ಪಾವತಿಯಾಗಬೇಕು. ಜತೆಗೆ ಮುಂದೆ ಬರುವ ಹೊಸ ಏಜೆನ್ಸಿಯಿಂದ ಅವರನ್ನು ಪುನರ್ ನೇಮಕ ಮಾಡಿಕೊಂಡು ಸರಿಯಾದ ಸಮಯಕ್ಕೆ ವೇತನ ಹಾಗೂ ಪಿಎಫ್, ಇಎಸ್ಐ ಸೌಲಭ್ಯಗಳನ್ನು ಸರಿಯಾಗಿ ಪಾವತಿಯಾಗುವಂತೆ ನೋಡಿಕೊಳ್ಳಬೇಕು ಎಂಬ ಸಲಹೆಗಳು ಸಭೆಯಲ್ಲಿ ವ್ಯಕ್ತವಾದವು.

ಒಟ್ಟಲು ಹಾಕುವ ಸಮಯ ಇದಾಗಿದ್ದು, ಈ ವಾರದ ಕೊನೆಯಲ್ಲಿ ನೀರು ಬಿಟ್ಟರೆ ಉತ್ತಮ ಎಂದು ಮಂಡ್ಯ ಹಾಗೂ ಮೈಸೂರುಜಿಲ್ಲಾಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು, ನಾಗೇಂದ್ರ, ಅಶ್ವಿನ್ ಕುಮಾರ್, ಡಾ.ಎಸ್.ಯತೀಂದ್ರ,ಧರ್ಮಸೇನ ಸೇರಿ ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಜಿಪಂ ಸಿಇಒಗಳು ಇತರರು ಇದ್ದರು.

ಸಚಿವದ್ವಯರಿಂದ ಕಾವೇರಿ ಮಾತೆಗೆ ಪೂಜೆ
ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಭೇಟಿ ನೀಡಿದ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಪೌರಾಡಳಿತ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಕಾವೇರಿ ಮಾತೆ ವಿಗ್ರಹಕ್ಕೆ  ಪೂಜೆ ಸಲ್ಲಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...