ಬೆಂಗಳೂರು: ರಾಜ್ಯದಲ್ಲಿ ಸೆ. 7ರಿಂದ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ KSRTC ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ.
ಸೆಪ್ಟೆಂಬರ್ 7 ರಿಂದ 19 ರ ವರೆಗಿನ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಅಡ್ಮಿಟ್ ಕಾರ್ಡ್ ತೋರಿಸಿ ಬಸ್ ಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.
ಪರೀಕ್ಷೆ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಮತ್ತು ಮರಳಿ ಕರೆತರಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಿರುವುದಾಗಿ ಸರ್ಕಾರ ತಿಳಿಸಿದೆ.
ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಕೂಡ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದೆ.