ಬೆಂಗಳೂರು: ಲಾಕ್ ಟೌನ್ ಸಡಿಲಗೊಳಿಸಿದ ನಂತರವೂ ಬಸ್ ಪ್ರಯಾಣಿಕರ ಸಂಖ್ಯೆ ಏರಿಕೆಯಾಗದ ಕಾರಣ ಚಾಲಕ ಮತ್ತು ನಿರ್ವಾಹಕರನ್ನು ರೊಟೇಷನ್ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲು ಕೆಎಸ್ಆರ್ಟಿಸಿ ನಿರ್ಧರಿಸಿದೆ .
ನಿಗಮದಲ್ಲಿರುವ 8200 ಬಸ್‌ಗಳ ಪೈಕಿ 3500 ಬಸ್ ಗಳು ಮಾತ್ರ ಕಾರ್ಯಾಚರಣೆಯಲ್ಲಿವೆ ಅಂದರೆ ಈಗಿನ ಪರಿಸ್ಥಿತಿಯಲ್ಲಿ ಶೇ.40 ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡುವುದು ನಿಗಮಕ್ಕೆ ತುಂಬಾ ಕಷ್ಟವಾಗುತ್ತಿದೆ ಆದ್ದರಿಂದ ಚಾಲಕ ಮತ್ತು ನಿರ್ವಾಹಕರು ಘಟಕದಲ್ಲಿ ಕುಳಿತುಕೊಳ್ಳುವ ಬದಲು ರೊಟೇಷನ್ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡುವಂತೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ ಆದೇಶಿಸಿದ್ದಾರೆ
ಬಸ್‌ಗಳ ಕಾರ್ಯಾಚರಣೆಗೆ ಅನುಗುಣವಾಗಿ ಅಗತ್ಯ ಇರುವಷ್ಟು ಸಿಬ್ಬಂದಿಯನ್ನಷ್ಟೇ ಕರ್ತವ್ಯಕ್ಕೆ ನೇಮಿಸಿ ಉಳಿದವರಿಗೆ ರಜೆ ನೀಡಬೇಕ. ಘಟಕದಲ್ಲಿ ಹೆಚ್ಚುವರಿಯಾಗಿ ಐದು ಸಿಬ್ಬಂದಿಯನ್ನು ಮಾತ್ರ ನಿಯೋಜಿಸಿಕೊಳ್ಳಬೇಕು. 55 ವರ್ಷ ಮೇಲ್ಪಟ್ಟವರು ಮತ್ತು ಕಾಯಿಲೆಯಿಂದ ಬಳಲುತ್ತಿರುವವರಿಗೆ ಆದ್ಯತೆ ಮೇರೆಗೆ ರಜೆ ನೀಡಬೇಕೆಂದು ಸೂಚನೆ ನೀಡಿದ್ದಾರೆ.
ವೇತನ ಕಡಿತವಿಲ್ಲ
ರೊಟೇಷನ್ ಆಧಾರದಲ್ಲಿ ಕೆಲಸಕ್ಕೆ ನಿಯೋಜನೆಗೊಂಡರೂ ಸಿಬ್ಬಂದಿಯ ಸಂಬಳದಲ್ಲಿ ಕಡಿತ ಆಗುವುದಿಲ್ಲ. ಎಲ್ಲರಿಗೂ ಸಮಾನವಾಗಿ ಕೆಲಸ ಸಿಗುವಂತೆ ನೋಡಿಕೊಳ್ಳಲಾಗುವುದು. ಅಲ್ಲದೇ ಪೂರ್ಣ ಪ್ರಮಾಣದ ಸಂಬಳ ನೀಡಲಾಗುವುದು ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ವಿಜಯಪಥಕ್ಕೆ ತಿಳಿಸಿದ್ದಾರೆ .
ಸದ್ಯ ನಿಗಮಕ್ಕೆ ಬರುತ್ತಿರುವ ಆದಾಯ ಡೀಸೆಲ್ ವೆಚ್ಚಕ್ಕೂ ಸಾಕಾಗುತ್ತಿಲ್ಲ. 30 ಸೀಟುಗಳ ಮಿತಿಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ. ಆದರೂ ಪ್ರಯಾಣಿಕರು ಬಸ್ 10 ಹಿಂದೇಟು ಹಾಕುತ್ತಿದ್ದಾರೆ ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಇಂದಿನಿಂದ ಎಸಿ ಬಸ್ ಗಳ ಸಂಚಾರ
ಇನ್ನು ಹವಾನಿಯಂತ್ರಿತ ಎಸಿ ಬಸ್‌ಗಳ ಕಾರ್ಯಾಚರಣೆಯನ್ನು ಗುರುವಾರದಿಂದ ಆರಂಭಿಸಿದ್ದು, ಬೆಂಗಳೂರಿನಿಂದ ಮೈಸೂರು, ಮಂಗಳೂರು, ಕುಂದಾಪುರ, ಚಿಕ್ಕಮಗಳೂರು, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ವಿರಾಜಪೇಟೆಗೆ ಬಸ್ ಗಳ ಸಂಚಾರವಿರಲಿದೆ .
ಇನ್ನು ರಾಜ್ಯದಲ್ಲಿ ಹರಡುತ್ತಿರುವ ಕೊರೊನಾ ವಿಶ್ವ ಮಾರಿಯನ್ನು ನಿಯಂತ್ರಿಸಲು ರಾತ್ರಿ ಪ್ರಯಾಣದಲ್ಲಿ ಹೊದಿಕೆ ನೀಡದಿರಲು ನಿರ್ಧರಿಸಲಾಗಿದೆ. ಈ ಹಿಂದೆ ಕೆಎಸ್ ಆರ್ಟಿಸಿಯಲ್ಲಿ ಪ್ರಯಾಣಿಸುವವರಿಗೆ ಹೊದಿಕೆ ನೀಡಲಾಗುತ್ತಿತ್ತು. ಇಂದಿನ ಪರಿಸ್ಥಿತಿಯಲ್ಲಿ ಹೊದಿಕೆಗಳನ್ನು ನೀಡದಿರುವುದರಿಂದ ಸೋಂಕು ನಿಯಂತ್ರಿಸಬಹುದೆಂದು ಸಂಸ್ಥೆ ಅಭಿಪ್ರಾಯಕ್ಕೆ ಬಂದು ಹೊದಿಕೆಗಳನ್ನು ನೀಡದಿರಲು ನಿರ್ಧರಿಸಿದೆ.