ಬೆಂಗಳೂರು: ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಬಗ್ಗೆ ತೆಗೆದುಕೊಂಡಿರುವ ತೀರ್ಮಾನ ನಮಗೆ ತೃಪ್ತಿ ತಂದಿಲ್ಲ ಹೀಗಾಗಿ ನಮ್ಮ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದು CITU ಕಾರ್ಯದರ್ಶಿ ಆನಂದ್ ಹೇಳಿದ್ದಾರೆ.
ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವ ವರೆಗೂ ಮುಷ್ಕರ ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ಪ್ರತಿಭಟನೆ ಕೈ ಬೀಡುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಸರ್ಕಾರ ನೀವು ಇಟ್ಟಿದ್ದ 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸಲು ಸಿದ್ಧವಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳುತ್ತಿದ್ದಾರೆ. ಆದರೆ ಲಿಖಿತ ರೂಪದಲ್ಲಿ ಕೊಡಲು ಸರ್ಕಾರ ಸಿದ್ಧವಿಲ್ಲ. ಹೀಗಾಗಿ ನೌಕರರು ಮುಷ್ಕರವನ್ನು ಮುಂದುವರಿಸಿದ್ದಾರೆ.
ಇಲ್ಲಿ ಸರ್ಕಾರ ಒಂದು ಕಡೆ ಸಾರ್ವಜನಿಕರನ್ನು ಮತ್ತೊಂದು ಕಡೆ ಸಾರಿಗೆ ನೌಕರರನ್ನು ಯಾಮಾರಿಸುವ ತಂತ್ರವನ್ನು ಮಾಧ್ಯಗಳ ಮುಂದೆ ತೋರಿಸುತ್ತಿದೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳು ಕೇಳುವ ಪ್ರಶ್ನೆಗೆ ಸರಿಯಾದ ಉತ್ತರ ನೀಡದೆ ಜಾರಿಕೊಳ್ಳುತ್ತಿದೆ.
ಇದರಿಂದ ಸರ್ಕಾರ ಇದೆಯೂ ಇಲ್ಲವೋ ಎಂಬುವುದು ತಿಳಿಯುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.