ಬೆಂಗಳೂರು: ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಮುಷ್ಕರ ಇಂದು ಸಂಜೆ ಅಂತ್ಯಗೊಂಡಿದೆ.
ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ಸೇರಿ ವಿವಿಧ ಇಲಾಖೆಯ ಸಚಿವರು, ಅಧಿಕಾರಿಗಳು ಮತ್ತು ಸಾರಿಗೆ ನೌಕರರೊಂದಿಗೆ ಕಳೆದ ಮೂರು ಗಂಟೆಯಿಂದ ನಡೆದ ನಾಲ್ಕು ಸುತ್ತಿನ ಸಭೆಯ ಬಳಿಕ ಸಂಧಾನ ಸಭೆ ಯಶಸ್ವಿಯಾಗಿದೆ.
ಈ ಬಗ್ಗೆ ವಿಕಾಸ ಸೌಧದಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೌಕರರ ಮುಖಂಡ ಚಂದ್ರಶೇಖರ್ ಮಾತನಾಡಿ, ಎನ್ಐಎನ್ಸಿ ( ಪ್ರಯಾಣಿಕರು ಟಿಕೆಟ್ ತೆಗೆದುಕೊಳ್ಳದಿದ್ದರೆ ನಿರ್ವಾಹಕರಿಗೆ ಹಾಕುತ್ತಿದ್ದ ಫೈನ್ ರದ್ದು) ಇನ್ನು ಮುಂದೆ ಇರುವುದಿಲ್ಲ. ಇನ್ನು ತರಬೇತಿ ಅವಧಿಯನ್ನು ಎರಡು ವರ್ಷದಿಂದ ಒಂದು ವರ್ಷಕ್ಕೆ ಇಳಿಸಿರುವುದು ಸೇರಿ 8 ಬೇಡಿಕೆಗಳನ್ನು ಈಡೇರಿಸಲು ಒಪ್ಪಿದ್ದಾರೆ ಎಂದು ಹೇಳಿದರು.
ಸಚಿವ ಲಕ್ಷ್ಮಣ ಸವದಿ, ಕಳೆದು ಮೂರು ದಿನಗಳಿಂದ ಸಾರಿಗೆ ನೌಕರರು ಏನು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ಆರಂಭಿಸಿದ್ದರು. ಈ ಬಗ್ಗೆ ಇಂದು ನಡೆದ ಸಭೆಯಲ್ಲಿ ಅವರ ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಚರ್ಚೆ ನಡೆಸಿದ್ದು ನೌಕರರ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ರಾತ್ರಿಯಿಂದ ಬಸ್ಗಳು ರಸ್ತೆಗೆ ಇಳಿಯಲಿವೆ ಎಂದು ಹೇಳಿದರು.
ಇನ್ನು ಸಾರಿಗೆ ನೌಕರರು ಪ್ರಮುಖವಾಗಿ ಸರ್ಕಾರಿ ನೌಕರರಾಗು ಬೇಡಿಕೆಯನ್ನು ಯಾವುದೇ ಕಾರಣಕ್ಕು ಈಡೇರಿಸಲು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟವಾಗಿ ಹೇಳಿದರು.
ಅದಕ್ಕೆ ಕಾರಣವನ್ನು ನೀಡಿದ್ದು, ನಿಮ್ಮ ಈ ಬೇಡಿಕೆ ಈಡೇರಿಸಿದರೆ ಉಳಿದ ನಿಗಮಗಳ ನೌಕರರು ಇದೇ ಬೇಡಿಕೆಯನ್ನು ಸರ್ಕಾರದ ಮುಂದೆ ಇಡುತ್ತಾರೆ. ಹಾಗಾಗಿ ನಿಮ್ಮ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದರು.