NEWSಕೃಷಿರಾಜಕೀಯ

ಅನ್ನದಾತರ ತೀವ್ರ ವಿರೋಧದ ನಡುವೆಯೂ ಭೂ ಸುಧಾರಣೆ ತಿದ್ದುಪಡಿ ಮಸೂದೆ ಅಂಗೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತ ಮತ್ತು ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಾಗೂ ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆಯೇ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆಯನ್ನು ಮಂಗಳವಾರ ವಿಧಾನ ಪರಿಷತ್‌ನಲ್ಲಿ ಅಂಗೀಕರಿಸಲಾಯಿತು.

ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಹೀಗಾಗಿ ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಮತ್ತೆ ಪರಿಷ್ಕೃತ ಮಸೂದೆ ಮಂಡಿಸಿದ್ದರು.

ಮಸೂದೆಯ ಕುರಿತು ವಿಸ್ತೃತ ಚರ್ಚೆ ಆಗಬೇಕೆಂದು ಕಾಂಗ್ರೆಸ್‌ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಚರ್ಚೆಯ ನಂತರ ಇಂದು ಮಸೂದೆಯನ್ನು ಮತಕ್ಕೆ ಹಾಕಲಾಯಿತು. ವಿಧೇಯಕದ ಪರವಾಗಿ 31 ಮತ ಹಾಗೂ ವಿರುದ್ಧವಾಗಿ 21 ಮತಗಳು ಚಲಾವಣೆಯಾಗಿದ್ದು, ಜೆಡಿಎಸ್ ಬೆಂಬಲದೊಂದಿಗೆ ಮಸೂದೆ ಅಂಗೀಕರಿಸಲಾಗಿದೆ. ಇದರೊಂದಿಗೆ ಭೂಮಿ ಮಾರಲು ಹಾಗೂ ಖರೀದಿಸಲು ಇದ್ದ ದೊಡ್ಡ ಬೇಲಿಯೊಂದನ್ನು ಕಿತ್ತುಹಾಕಿದಂತಾಗಿದ್ದು, ಇನ್ನುಮುಂದೆ ಯಾರೂ ಬೇಕಾದರೂ ಕೃಷಿ ಭೂಮಿ ಖರೀದಿಸಬಹುದಾಗಿದೆ.

ಈ ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ ಕಾಂಗ್ರೆಸ್, ‘ನಾವೆಲ್ಲ ರೈತರು ಬೆಳೆದ ಅನ್ನ ತಿನ್ನುವವರು. ನೀವೂ ಅದನ್ನೇ ತಿನ್ನುತ್ತೀರಿ ಎಂದು ಭಾವಿಸಿರುವೆ’ ಎಂದು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ನಡೆಯಿತು.

ಇದಕ್ಕೂ ಮೊದಲು ಜೆಡಿಎಸ್ ವಿಧೇಯಕದ ಪರವಾಗಿ ಮತ ಚಲಾಯಿಸಿದ್ದಕ್ಕೆ ಬಿಜೆಪಿ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...