NEWSನಮ್ಮರಾಜ್ಯರಾಜಕೀಯವಿಜ್ಞಾನ

ದುರ್ಬಲ ಮಂತ್ರಿ ಲಕ್ಷ್ಮಣ್ ಸವದಿ- ಮುಖ್ಯಮಂತ್ರಿಗಳೇ ಸಾರಿಗೆ ನೌಕರರ ಸಮಸ್ಯೆಗೆ ಸ್ಪಂದಿಸಿ: ಎಎಪಿಯ ಕುಶಲ ಸ್ವಾಮಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಜನ ಸಾಮಾನ್ಯರು ನಲುಗುವಂತೆ ಮಾಡಿದೆ. ರೈತ, ಕಾರ್ಮಿಕ, ಮಹಿಳಾ ವಿರೋಧಿಯಾದ ಈ ಸರ್ಕಾರ ಯಾವುದೇ ಸಮಸ್ಯೆಗಳನ್ನು ಸರಿಯಾಗಿ ನಿಭಾಯಿಸದೆ ವಿಫಲಗೊಂಡಿದೆ. ಈಗ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸದೆ ಜನಸಾಮಾನ್ಯರನ್ನು ತೊಂದರೆಗೆ ಸಿಲುಕಿಸಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರಿಗೆ ಸರಿಯಾಗಿ ಸ್ಪಂದಿಸದೆ ಉದ್ಧಟತನ ತೋರಿದ ಸರ್ಕಾರ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

1.30 ಲಕ್ಷ ನೌಕರರು ಅನೇಕ ವರ್ಷಗಳಿಂದ ಸೂಕ್ತ ಸ್ಥಾನಮಾನಕ್ಕೆ ಹೋರಾಟ ಮಾಡುತ್ತಲೇ ಇದ್ದಾರೆ ಆದರೂ ಯಾವುದೇ ಸರ್ಕಾರಗಳು ಸೂಕ್ತವಾಗಿ ಸ್ಪಂದಿಸಿಲ್ಲ, ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೌಕರರು ಮಾತುಕತೆಗೆ ಸಿದ್ದರಿದ್ದಾರೆ ಎಂದು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಹೊರತು ಸಮಸ್ಯೆ ನಿವಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಹಣಕಾಸಿನ ಸಮಸ್ಯೆ ಹೇಳಿಕೊಂಡು ಅನೇಕ ತಿಂಗಳುಗಳ ಕಾಲ ಸಂಬಳ ನೀಡದೆ ಸತಾಯಿಸಿದ್ದ ಸರ್ಕಾರ ಅಂತೂ ಇಂತೂ ಕೆಲವರಿಗೆ ಸಂಬಳ ನೀಡಿ ಕೈತೊಳೆದುಕೊಂಡಿತೆ ಹೊರತು ಸರಿಯಾಗಿ ಸಮಸ್ಯೆ ನಿಭಾಯಿಸದೆ ನೌಕರರನ್ನು ಬೀದಿ ಪಾಲು ಮಾಡಿದೆ ಎಂದು ಆರೋಪಿಸಿದರು.

ಪ್ರಸ್ತುತ ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದಾದರೆ ಸರ್ಕಾರಿ ನೌಕರರಿಗೆ ನೀಡಿತ್ತಿರುವ ಸಂಬಳವನ್ನಾದರೂ ನೀಡಿ. ಸಾರಿಗೆ ಸಚಿವ ಲಕ್ಷ್ಮಣ್ ಸವದಿ ನಾಲಾಯಕ್ ಮಂತ್ರಿಯಾಗಿದ್ದು ಇದುವರೆಗು ಇವರ ಬಳಿ ಯಾವುದೇ ಸಮಸ್ಯೆ ಹೋದರು ಅಚ್ಚುಕಟ್ಟಾಗಿ ನಿಭಾಯಿಸಿದ ಇತಿಹಾಸವೇ ಇಲ್ಲ. ಇಂತಹ ದುರ್ಬಲ ಮಂತ್ರಿಯನ್ನು ಬಿಟ್ಟು ನೇರವಾಗಿ ಮುಖ್ಯಮಂತ್ರಿಗಳೆ ನೌಕರರ ಜತೆ ಮಾತುಕತೆಗೆ ಇಳಿದು ಸಮಸ್ಯೆಗೆ ಸ್ಪಂದಿಸಬೇಕು ಎಂದರು.

ಈ ದಿಢೀರ್ ಪ್ರತಿಭಟನೆಯಿಂದ ಸಾವಿರಾರು ಜನರು ತೊಂದರೆಗೆ ಸಿಲುಕಿದ್ದಾರೆ. ಇವರಿಗೆ ಮುಖ್ಯಮಂತ್ರಿಗಳು ಸೂಕ್ತವಾಗಿ ಉತ್ತರಿಸಬೇಕು. ಕೆಎಸ್ಆರ್‌ಟಿಸಿಯ ನಾಲ್ಕೂ ವಿಭಾಗಗಳಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದಿಂದ ಇಡೀ ದೇಶದಲ್ಲೇ ಉತ್ತಮ ಸಾರಿಗೆ ವ್ಯವಸ್ಥೆ ಹಳ್ಳ ಹಿಡಿದಿದೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಶೀಘ್ರ ಸಮಸ್ಯೆ ಪರಿಹಾರ ಮಾಡಬೇಕು ಎಂದರು.

ರಾಜ್ಯ ಯುವ ಘಟಕದ ಅಧ್ಯಕ್ಷ ಮುಕುಂದ್ ಗೌಡ ಉಪಸ್ಥಿತರಿದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್