ನ್ಯೂಡೆಲ್ಲಿ: ರಾಷ್ಟ್ರ ರಾಜಧಾನಿ ನ್ಯೂಡೆಲ್ಲಿಯಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಹಂತದ ಲಾಕ್ ಡೌನ್ ಜಾರಿಗೊಳಿಸಲು ನಿರ್ಧರಿಸಿರುವ ಸರ್ಕಾರ, ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಿದೆ.
ನ್ಯೂಡೆಲ್ಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಪರಿಣಾಮ, ಸಮಾರಂಭಗಳಿಗೆ 200 ಜನ ಅತಿಥಿಗಳು ಸೇರಲು ಅವಕಾಶ ನೀಡಿದ್ದ ಆದೇಶವನ್ನು ಹಿಂಪಡೆಯಲು ಸರ್ಕಾರ ನಿರ್ಧಾರ ಮಾಡಿದ್ದು, ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್‌ಡೌನ್ ಜಾರಿಗೊಳಿಸಲು ತೀರ್ಮಾನಿಸಿದೆ.
ಈ ಕುರಿತು ಮಾತನಾಡಿದ ನ್ಯೂಡೆಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್‌ಡೌನ್ ಪ್ರಸ್ತಾವನೆ ಅನುಮೋದನೆಗಾಗಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರಿಗೆ ಕಳುಹಿಸಲಾಗಿದೆ.
ಸಮಾರಂಭಕ್ಕೆ 200 ಅತಿಥಿಗಳ ಬದಲು 50 ಅತಿಥಿಗಳು ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಪ್ರಸ್ತಾವನೆಯಲ್ಲಿ ಮನವಿ ಮಾಡಲಾಗಿದೆ” ಎಂದರು.