ಚೆನ್ನೈ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರ ಪ್ರಶಸ್ತಿ ವಿಜೇತ, ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ನಿನ್ನೆ ತಡರಾತ್ರಿ ಉಸಿರಾಟದ ಸಮಸ್ಯೆ ಎದುರಾಗಿದ್ದರಿಂದ ಸ್ಥಳಾಂತರಿಸಲಾಗಿದೆ ಎಂದು ಹೆಲ್ತ್‌ಕೇರ್ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇದೇ ಆಗಸ್ಟ್ 5ರಂದು ಕೊರೊನಾ ದೃಢಪಟ್ಟಿದ್ದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ನುರಿತ ವೈದ್ಯ ತಜ್ಞರ ತಂಡ ಚಿಕಿತ್ಸೆ ನೀಡುತ್ತಿದ್ದು ಸದ್ಯ ಕೃತಕ ಉಸಿರಾಟದಲ್ಲಿದ್ದಾರೆ.
ಸೋಂಕು ದೃಢಪಟ್ಟ ನಂತರ, ಎಸ್‌ಪಿಬಿ ತನ್ನ ಫೇಸ್‌ಬುಕ್ ಪುಟದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿ, ಹೋಂ ಕ್ವಾರಂಟೈನಲ್ಲಿ ಇದ್ದು ಚಿಕಿತ್ಸೆ ಪಡೆಯಬಹುದು ಎಂದು ವೈದ್ಯರು ಸೂಚನೆ ನೀಡಿದ್ದರೂ ಸಹ ಇದು ಕುಟುಂಬ ಸದಸ್ಯರಿಗೆ ಹರಡಬಹುದು ಎಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕಳೆದ ಎರಡು ಮೂರು ದಿನಗಳಿಂದ ನನಗೆ ಸ್ವಲ್ಪ ಉಸಿರಾಟದ ಸಮಸ್ಯೆ ಇದೆ. ಕಫ ಶೀತ ಮತ್ತು ಜ್ವರವೂ ಇದೆ ಅಷ್ಟೆ. ಮತ್ತೆ ಯಾವುದೇ ಸಮಸ್ಯೆ ಇಲ್ಲ. ಆದ್ದರಿಂದ ಕೊರೊನಾ ಲಕ್ಷಣವಷ್ಟೇ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಅಭಿಮಾನಿಗಳು ಮತ್ತು ಹಿತೈಷಿಗಳು ಗಾಬರಿಗೊಳ್ಳಬಾರದು. ಅಲ್ಲದೇ ನನ್ನ ಆರೋಗ್ಯ ವಿಚಾರಿಸಲು ಕರೆ ಮಾಡಬಾರದು ಎಂದು ವಿನಂತಿಸಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail