NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಸಿಎಂ ಸ್ಥಾನ ತ್ಯಜಿಸಿ ಪರ್ಯಾಯ ವ್ಯವಸ್ಥೆ ಮಾಡೋಣ: ಬಿಎಸ್‌ವೈಗೆ ಶಾಕ್‌ ಕೊಟ್ರ ಅಮಿತ್ ಶಾ?

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಬಿಜೆಪಿ ಹೈಕಮಾಂಡ್ ಬುಲಾವ್ ಮೇರೆಗೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪುತ್ರ ವಿಜಯೇಂದ್ರ ಅವರೊಂದಿಗೆ ದೆಹಲಿಗೆ ಬಂದಿದ್ದರು. ಈ ವೇಳೆ ಅಮಿತ್ ಶಾ ಅವರು ನಾಯಕತ್ವ ಬದಲಾವಣೆಯ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಿಎಸ್​ವೈ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಅಮಿತ್ ಶಾ ಅವರು ನೇರವಾಗಿ ನಾಯಕತ್ವ ಬದಲಾವಣೆಯ ವಿಷಯ ಪ್ರಸ್ತಾಪ ಮಾಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಇನ್ನು ಮುಖ್ಯಮಂತ್ರಿ ಹುದ್ದೆ ತ್ಯಜಿಸಿದರೆ ಪರ್ಯಾಯವಾಗಿ ರಾಜ್ಯಪಾಲರ ಹುದ್ದೆ. ಮತ್ತು ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಕರ್ನಾಟಕದ ಕೋಟಾ ತುಂಬಲು ಚಿಂತನೆ ನಡೆಸಲಾಗಿದೆ. ಹೀಗಾಗಿ ಆ ಕೋಟಾದಡಿ ಪುತ್ರ ರಾಘವೇಂದ್ರ ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಮುಂದಿನ ವಾರ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ರಾಘವೇಂದ್ರ ಅವರಿಗೆ ಕೇಂದ್ರ ಸಚಿವ ಸ್ಥಾನ ಸಿಗಲಿದೆಯೇ ಎಂಬ ಕುತೂಹಲವು ರಾಜ್ಯ ಬಿಜೆಪಿಗರಲ್ಲಿ ಹೆಚ್ಚಾಗಿದೆ.

ಇನ್ನು ಈ ಬಗ್ಗೆ ಶೀಘ್ರದಲ್ಲೇ ತಮ್ಮ ನಿರ್ಧಾರ ತಿಳಿಸುವಂತೆಯೂ ಯಡಿಯೂರಪ್ಪ ಅವರಿಗೆ ಸೂಚನೆ ನೀಡಲಾಗಿದೆ. ಆದರೆ, ಅಮಿತ್ ಶಾ ಇಟ್ಟ ಈ ಪ್ರಸ್ತಾವನೆಯಿಂದ ಬಿಎಸ್​ವೈ ಶಾಕ್ ಆಗಿದ್ದು, ಅಮಿತ್ ಶಾ ನಿವಾಸದಿಂದ ತೆರಳುವಾಗ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹಾಗೆ ತೆರಳಿದರು.

ಬಳಿಕ ಪುತ್ರ ವಿಜಯೇಂದ್ರ ಜತೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ನಾಯಕತ್ವ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ. ಆ ಗೊಂದಲ ಇರುವುದು ಮಾಧ್ಯಮದಲ್ಲಿ ಮಾತ್ರ ಎಂದಷ್ಟೇ ಹೇಳಿ ಹೊರಟಿದ್ದು ಈ ಅನುಮಾನಕ್ಕೆ ಇನ್ನಷ್ಟು ಪುಷ್ಟಿ ನೀಡುವಂತಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್