NEWSನಮ್ಮರಾಜ್ಯರಾಜಕೀಯ

ಸಿದ್ದರಾಮಯ್ಯ ಸ್ವತಂತ್ರ ಪಕ್ಷ ಕಟ್ಟಿ, 5 ಸ್ಥಾನ ಗೆದ್ದು ತೋರಿಸಲಿ ನೋಡೋಣ: ಎಚ್‌ಡಿಕೆ ಸವಾಲ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ‌. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್‌ಗಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ ಎಂದು ಸರಣಿ ಟ್ವೀಟ್‌ ಮಾಡುವ ಮೂಲಕ ಪ್ರಶ್ನಿಸಿದ್ದಾರೆ.

ಜೆಡಿಎಸ್ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತು? ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್‌ನವರಾಗಿದ್ದರು ಎಂದು ಹಳೆಯದನ್ನು ನೆನಪಿಸಿದರು.

ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ‌. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ ಎಂದು ಇದೇ ವೇಳೆ ಸಲಹೆ ನೀಡಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಜೆಡಿಎಸ್‌ಗೆ ಇರುವ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ಇನ್ನೂ ಸಮಯವಿದೆ. ವೇದಿಕೆಯೂ ಸಿಗಲಿದೆ. ಆಗ ಸಿದ್ದರಾಮಯ್ಯನವರು ನಮ್ಮ ಜೊತೆ ಚರ್ಚೆಗೆ, ಸೆಣಸಾಟಕ್ಕೆ ಬರಲಿ. ಒಂದುವೇಳೆ ಅವರೇ ಒಂದು ಪಕ್ಷವನ್ನೇನಾದರೂ ಕಟ್ಟಿದರೆ ಅದಕ್ಕೂ ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣವಂತೆ‌. ಅಲ್ಲಿಯವರೆಗೆ ಅವರು ತಾಳಲಿ ಎಂದು ತಿರುಗೇಟು ನೀಡಿದ್ದಾರೆ.

ಜೆಡಿಎಸ್‌ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ.
ಜೆಡಿಎಸ್‌ಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್‌ಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ