CrimeNEWSಸಿನಿಪಥ

ನಟ ಮಯೂರ್ ಪಟೇಲ್ ಗೆ ಜೀವ ಬೆದರಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸೈಟ್ ಖರೀದಿ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಚಂದನವನದ ನಟ ಮಯೂರ್ ಪಟೇಲ್ ಗೆ ಜೀವ ಬೆದರಿಕೆ ಹಾಕಿದ್ದಾರೆ.

ಸುಬ್ರಹ್ಮಣ್ಯಂ ಎಂಬುವರಿಂದ ಮಯೂರ್ ಅವರು ಬೆಂಗಳೂರು ಹೊರವಲಯದ ಬೇಗೂರು ಬಳಿಯ ಪರಂಗಿಪಾಳ್ಯ ದಲ್ಲಿ ನಿವೇಶನ ಖರೀದಿಗೆ ಮುಂದಾಗಿದ್ದಾರೆ. ಹೀಗಾಗಿ ಜನವರಿ 22ರಂದು ಗೆಳೆಯರೊಂದಿಗೆ ಮಯೂರ ನಿವೇಶ ನೋಡಲು ಹೋಗಿದ್ದರು. ಆ ವೇಳೆ ಇದು ಅನಂತರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. ಇಲ್ಲಿಗೆ ಬಂದರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಯೂರ್‌ ಪೊಲೀಸ್‌ಠಾಣೆಯಲ್ಲಿ ದೂರು ನೀಡಿದ್ದಾರೆ.

ಇತ್ತ ಅನಂತರಾಮ ರೆಡ್ಡಿಯನ್ನು ಸಂಪರ್ಕಿಸಿದ ಮಯೂರ್‌ಗೆ ಅವರು ಜಾಗವನ್ನು ನನ್ನ ಮಗನ ಹೆಸರಿಗೆ ದಾನಪತ್ರ ಮಾಡಿಕೊಟ್ಟಿದ್ದೇನೆ. ಅಲ್ಲಿಗೆ ಯಾರನ್ನೂ ಕೂಡ ಬರಲು ಬಿಡಲ್ಲ. ನೀನು ಆ ಜಾಗಕ್ಕೆ ಬಂದರೆ ನಾನು ಏನು ಎಂದು ಆಮೇಲೆ ಗೊತ್ತಾಗುತ್ತದೆ ಎಂದು ಅನಂತರಾಮ ರೆಡ್ಡಿ ಮಯೂರ್‌ಗೆ ಜೀವ ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ.

ನಾನು ಅಗ್ರಿಮೆಂಟ್ ಹಾಕಿಕೊಂಡಿರುವ ನಿವೇಶನಕ್ಕೆ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಅನಂತ ರಾಮರೆಡ್ಡಿ ನಿಜ ದಾಖಲಾತಿ ಅಂತ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಯೂರ್ ಪಟೇಲ್ ದೂರಿದ್ದಾರೆ. ಅಲ್ಲದೆ ಅನಂತರಾಮರೆಡ್ಡಿ ಆತನ ಮಗ ಮಂಜುನಾಥರೆಡ್ಡಿ ಹಾಗೂ ನಾಲ್ವರ ವಿರುದ್ಧ ಎಚ್ ಎಸ್ ಆರ್‌ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...