CrimeNEWSಸಂಸ್ಕೃತಿ

ಪತ್ನಿ ಬಿಟ್ಟುಹೋದ ದುಃಖದಲ್ಲಿ ದೇವಸ್ಥಾನದಲ್ಲೇ ನೇಣಿಗೆ ಶರಣಾದ ಅರ್ಚಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿಕ್ಕೋಡಿ: ಪತ್ನಿ ಬಿಟ್ಟು ಹೋದಳೆಂಬ ನೋವಿನ ತಾನು ಪೂಜಿಸುತ್ತಿದ್ದ ದೇವಿಯ ಎದುರೇ ದೇವಸ್ಥಾನದಲ್ಲಿ ಅರ್ಚಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

ಹುಕ್ಕೇರಿ ಪಟ್ಟಣದ ಲಕ್ಷ್ಮೀ ಗಲ್ಲಿಯಲ್ಲಿರುವ ಲಕ್ಷ್ಮೀ ದೇವಸ್ಥಾನದಲ್ಲಿ ಅಶೋಕ ಪೂಜೇರಿ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ನಿತ್ಯ ಪತ್ನಿ ಜೊತೆಗೆ ಜಗಳವಾಡುತ್ತಿದ್ದ ಅಶೋಕನಿಂದ ಬೇಸತ್ತ ಆಕೆ ನಾಲ್ಕೈದು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಶೋಕ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮೃತ ಅರ್ಚಕನಿಗೆ ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಸ್ಥಳಕ್ಕೆ ಹುಕ್ಕೇರಿ ಎಸ್ಐ ಸಿದ್ದರಾಮಪ್ಪ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ