NEWSಸಂಸ್ಕೃತಿ

ನಾಡಿನ ಜನತೆಗೆ ಬಸವ ಜಯಂತಿಯ ಶುಭಾಶಯ ಕೋರಿದ ಮಾಜಿ ಪ್ರಧಾನಿ ಎಚ್‌ಡಿಡಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಸವಣ್ಣನವರ ಸಮಾನತೆಯ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ಕಾರ್ಯರೂಪಗೊಳಿಸುವತ್ತ ನಮ್ಮ ನಡೆ ಇರಲಿ ಎಂದು ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ತಿಳಿಸಿದ್ದಾರೆ.

ಇದೇ ವೇಳೆ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್‌ ಮಾಡಿದ್ದಾರೆ.

ಎಚ್‌ಡಿಕೆಯಿಂದ ಬಸವ ಜಯಂತಿಯ ಶುಭಾಶಯಗಳು
ಕಾಯಕ ನಿಷ್ಠೆ ಮತ್ತು ಸಮಾನತೆಯನ್ನು ಜಗತ್ತಿಗೆ ಸಾರಿದ ಬಸವಣ್ಣ ನಮ್ಮೆಲ್ಲರಿಗೂ ದಾರಿದೀಪ. ಇಂತಹ ಮಹಾನ್ ದಾರ್ಶನಿಕನ ಆದರ್ಶಗಳನ್ನು ಪರಿಪಾಲಿಸಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಎಲ್ಲರಿಗೂ ಬಸವ ಜಯಂತಿಯ ಶುಭಾಶಯಗಳು ಎಂದು ಟ್ವೀಟ್‌ ಮಾಡಿದ್ದಾರೆ.

ಬಸವ ಜಯಂತಿಯ ಶುಭಾಶಯಗಳು : ಸಿದ್ದರಾಮಯ್ಯ
ಸಮಾನತೆ, ಸ್ವಾವಲಂಬನೆ ಮತ್ತು ಸ್ವಾಭಿಮಾನಿ ಬದುಕಿನ ಬಸವಣ್ಣನವರ ಸಂದೇಶ ನಮ್ಮೆಲ್ಲರ ನಡೆ-ನುಡಿಯಲ್ಲಿರಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ನಮ್ಮ ಕರ್ನಾಟಕ ಬಸವಣ್ಣ ಕನಸು‌ ಕಂಡ ‘ಅನುಭವ ಮಂಟಪ’ ಆಗಲಿ.ಗೋಡೆಯ ಮೇಲಿನ ಬಸವಣ್ಣನ ಚಿತ್ರ,‌ ನಮ್ಮೆಲ್ಲರ ಎದೆಯೊಳಗೂ ಇರಲಿ. ನಾಡಿನ ನನ್ನೆಲ್ಲ ಬಂಧುಗಳಿಗೆ‌ ಬಸವ ಜಯಂತಿಯ ಶುಭಾಶಯಗಳು ಎಂದು ಟ್ವೀಟ್‌ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ