NEWSಸಂಸ್ಕೃತಿ

ಬಡತನ, ಶೋಷಣೆಮುಕ್ತ ಸಾಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಾಜಿ ಸಿಎಂ ಅರಸು: ಪುಟ್ಟಮಾದಯ್ಯ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಬಡತನ ಮತ್ತು ಶೋಷಣೆಮುಕ್ತ ಸಾಮಾಜ ನಿರ್ಮಾಣ, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಅವಿರತ ಹೋರಾಟ ಮಾಡಿದ ಮಹಾನ್ ಚೇತನ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಎಂದು ಉಪನ್ಯಾಸಕ ಪುಟ್ಟಮಾದಯ್ಯ ಹೇಳಿದರು.

ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಡಿ.ದೇವರಾಜ ಅರಸು ಅವರ 106 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಮೇಲ್ವರ್ಗದ ವಿರೋಧವನ್ನು ಲೆಕ್ಕಿಸದೆ ಉಳುವವನೆ ಭೂ ಒಡೆಯ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ಸೇರಿದಂತೆ ಅನೇಕ ಸುಧಾರಣೆಗಳನ್ನು ಜಾರಿಗೆ ತರುವ ಮೂಲಕ ಶ್ರೀ ಸಾಮಾನ್ಯರಲ್ಲಿ ಅಜರಾಮರರಾಗಿ ಉಳಿದಿದ್ದಾರೆ. ಅರಸು ಅವರು ಆಡಳಿತದಲ್ಲಿ ಬಡತನ, ಗ್ರಾಮೀಣ ಪ್ರದೇಶದಲ್ಲಿ ಜೀವಂತವಾಗಿದ್ದ ಜೀತಪದ್ಧತಿ ಮತ್ತು ಮಲಹೊರುವ ಪದ್ಧತಿಯನ್ನು ಹೋಗಲಾಡಿಸಲು ಕಾನೂನು ಜಾರಿಗೆ ತಂದರು.

ಜೀತವಿಮುಕ್ತರಿಗೆ ಉದ್ಯೋಗ, ಆಶ್ರಯ ನೀಡುವ ಮೂಲಕ ಮುಖ್ಯವಾಹಿನಿಗೆ ತರುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಿದರು. ಇಂದಿರಾ ಗಾಂಧಿಯವರು 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೆ ತಂದಾಗ ದೇಶದ ಎಲ್ಲಾ ಭಾಗದಲ್ಲೂ ಮೇಲ್ವರ್ಗದ ವಿರೋಧವನ್ನು ಕಟ್ಟಿಕೊಳ್ಳಲು ಹಿಂದೇಟು ಹಾಕಿದರು.

ಆದರೆ ಅರಸು ಅವರು ಮೇಲ್ವರ್ಗದ ವಿರೋಧವನ್ನು ಲೆಕ್ಕಿಸದೆ ದೇಶದಲ್ಲಿಯೇ ಪ್ರಥಮ ಬಾರಿಗೆ 20 ಅಂಶಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದರು. ಕೆಲ ಸುಧಾರಣೆಗಳಿಗೆ ಪಟ್ಟಭದ್ರ ಹಿತಾಸಕ್ತಿಗಳು ಸಾಕಷ್ಟು ತೊಡಕುಗಳನ್ನು ಒಡ್ಡಿದ್ದರೂ ಸಹ ಎದೆಗುಂದದೆ ಜಾರಿಗೊಳಿಸಲು ಮುಂದಾಗಿ ಸಾಮಾಜಿಕ ನ್ಯಾಯವನ್ನು ತಂದುಕೊಟ್ಟರು ಎಂದು ತಿಳಿಸಿದರು.

ಶಾಸಕ ಕೆ.ಮಹದೇವ್ ಮಾತನಾಡಿ ಅರಸು ಅವರು ಸಮಾಜದಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಶಿಕ್ಷಣದಿಂದ ಮಾತ್ರ ಸಮಗ್ರ ಪ್ರಗತಿ ಸಾಧ್ಯವಾಗಲಿದೆ. ರಾಜ್ಯ ಸರ್ಕಾರ ವ್ಯಾಸಂಗಕ್ಕೆ ಪೂರಕವಾಗಿ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಇದರ ಪ್ರಯೋಜನ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು.

ಅರಸು ಅವರು ಸರಳ ಹಾಗೂ ಮೂಲತಃ ಶ್ರಮಜೀವಿಯಾಗಿದ್ದರು. ಮುಖ್ಯಮಂತ್ರಿಯಾಗುವ ಮೊದಲು ಸ್ವತಃ ಹೊಲದಲ್ಲಿ ನೇಗಿಲು ಹಿಡಿದು ಉತ್ತು, ಬೆಳೆ ಬೆಳೆಯುತ್ತಿದ್ದರು. ಕೃಷಿಕರ, ಶ್ರಮಿಕರ ಕಷ್ಟ, ನೋವಿನ ಅರಿವು ಅರಸು ಅವರಿಗೆ ಇತ್ತು. 1973ರಲ್ಲಿ ಮೈಸೂರನ್ನು ಕರ್ನಾಟಕ ಎಂದು ನಾಮಕರಣ ಮಾಡಿದರು ಅವರು ಸದ ಬಡವರ ಪರ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದ ಅರಸು ಅವರ ಹೆಸರು ದೇಶದ ಮುಖ್ಯಮಂತ್ರಿಗಳ ಚರಿತ್ರೆಯಲ್ಲಿ ಅಜರಾಮರವಾಗಿದೆ ಎಂದರು.

ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎನ್.ಡಿ.ಕಾಮತರಾಜ್ ಮಾತನಾಡಿ, ಅರಸು ಅವರು ರಾಜ್ಯ ಕಂಡ ಶ್ರೇಷ್ಠ ಸಾಮಾಜಿಕ ಸುಧಾರಕರು ಹಾಗೂ ಹಿಂದುಳಿದ ವರ್ಗದ ನೇತಾರರು, ಇವರು ಸತತ 8 ವರ್ಷಗಳ ಮುಖ್ಯಮಂತ್ರಿಯಾಗಿ ಅತ್ಯಂತ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಇವರು ಸಮಾಜದಲ್ಲಿ ಕೆಳವರ್ಗ ಎಂದು ನೋಡಲಾಗುತ್ತಿದ್ದ ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ಜಾತಿಗಳನ್ನು ಗುರಿಯಾಗಿಟ್ಟುಕೊಂಡು ಸುಧಾರಣೆಗಳನ್ನು ತರುತ್ತಿದ್ದರು ಎಂದರು.

ಕಾರ್ಯಕ್ರಮದಲ್ಲಿ ಪ್ರಭಾರ ತಹಸೀಲ್ದಾರ್ ಯದುಗಿರೀಶ್, ದೇವರಾಜು ಅರಸು ವಂಸಸ್ಥರಾದ ಕೃಷ್ಣ ಅರಸ್, ವಿನಯ್ ಅರಸ್, ಉಪ ತಹಸೀಲ್ದಾರ್ ಟ್ರೀಜಾ, ಶಿರಸ್ತೇದಾರ್ ವಿನಯ್ ಕುಮಾರ್, ಬಿಸಿಎಂ ವಿಸ್ತರಣಾಧಿಕಾರಿ ಪಿ.ಕೆ.ಆರತಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಶಿರಸ್ತೇದಾರ್ ಸಣ್ಣ ಸ್ವಾಮಿ, ಎಇಇ ಶಿವಕುಮಾರ್, ಮುಖಂಡರಾದ ನಾಗರಾಜು, ನಿಲಯಪಾಲಕರಾದ ಜಯರಾಮ್, ರಮೇಶ್, ಮಂಜುನಾಥ್, ಕರುಣಾಕ್ಷಿ, ಈಶ್ವರೇಗೌಡ ಇದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ